ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಆಚರಣೆ

0

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ  ಸೆಪ್ಟೆಂಬರ್ 6ರಂದು ಶಿಕ್ಷಕರ ದಿನಾಚರಣೆಯನ್ನು ಶಾಲಾ ಸಭಾಭವನದಲ್ಲಿ ಆಚರಿಸಲಾಯಿತು.

ಈ ಕಾರ್ಯಕ್ರಮವನ್ನು ಪ್ರಾರ್ಥನಾ ವಿಧಿಯೊಂದಿಗೆ ಪ್ರಾರಂಭಿಸಲಾಯಿತು. ಈ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯ ವಂ|ಸ್ವಾ|ದೀಪಕ್ ಲಿಯೋ ಡೇಸ ರವರು ಉಪಸ್ಥಿತರಿದ್ದರು.ಶಿಕ್ಷಕರಿಗೆ ಹಲವು ಅದೃಷ್ಟ ಸ್ಪರ್ಧೆಗಳನ್ನು ಹಮ್ಮಿಕೊಂಡಿದ್ದರು. ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು.

ವಿದ್ಯಾರ್ಥಿಗಳು ಹಾಡು ನೃತ್ಯ ನಾಟಕದ ಮೂಲಕ ಶಿಕ್ಷಕರನ್ನು ಮನರಂಜಿಸಿದರು. ವಿದ್ಯಾರ್ಥಿಗಳಾದ ಸುಧ್ಯಾನ್ ಜೈನ್ ಮತ್ತು ಐಸ್ಮಾ ರವರು ಕಾರ್ಯಕ್ರಮವನ್ನು ನಿರೂಪಿಸಿ, ಸೌರವ್ ಶೆಟ್ಟಿ ರವರು ಸ್ವಾಗತಿಸಿ, ಪರ್ಲ್ ತಾವ್ರೋ ರವರು ಧನ್ಯವಾದವನ್ನು ಸಮರ್ಪಿಸಿದರು.

LEAVE A REPLY

Please enter your comment!
Please enter your name here