ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ತಾಲೂಕು ಮಟ್ಟದ ಪುಟ್ ಬಾಲ್ ಪಂದ್ಯಾಟ

0

ಮಡಂತ್ಯಾರು: ಪದವಿ ಪೂರ್ವ ಶಿಕ್ಷಣ ಇಲಾಖೆ ಮಂಗಳೂರು ದ.ಕ ಹಾಗೂ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜು ಇದರ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಬಾಲಕರ ಪುಟ್ ಬಾಲ್ ಪಂದ್ಯಾಟವು ಜರಗಿತು.

ಮಡಂತ್ಯಾರು ಸೇಕ್ರೆಡ್ ಪದವಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ.ಪ್ರಕಾಶ್ ಡಿಸೋಜ ಪಂದ್ಯಾಟವನ್ನು ಉದ್ಘಾಟಿಸಿದರು. ಶಿಕ್ಷಣ ಜ್ಞಾನವನ್ನು ನೀಡಿದರೆ ಕ್ರೀಡೆ ಬುದ್ಧಿ, ಜ್ಞಾನದ ಜೊತೆಗೆ ಸಂಯಮ, ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ನೀಡುವುದರ ಜೊತೆಗೆ ಸ್ಪರ್ಧಾತ್ಮಕ ಮನೋಭಾವವನ್ನು ಹೆಚ್ಚಿಸುತ್ತದೆ. ಕ್ರೀಡೆಯಲ್ಲಿ ಸೋಲು ಗೆಲುವು ಸಾಮಾನ್ಯ.ಎರಡನ್ನು ಸ್ವೀಕರಿಸುವ ಮನೋಭಾವವನ್ನು ಕ್ರೀಡಾ ಪಟುಗಳು ಬೆಳೆಸಿಕೊಳ್ಳಬೇಕು.ತಾಲೂಕು ಮಟ್ಟದಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕ್ರೀಡಾ ಪಟುಗಳು ಸಾಧನೆ ಮಾಡುವಂತಾಗಲೆಂದು ಅವರು ಶುಭಹಾರೈಸಿದರು.

ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಗಳ ಜೊತೆ ಕಾರ್ಯದರ್ಶಿ ವಂ|ಡಾ|ಸ್ಟ್ಯಾನಿ ಗೋವಿಯಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಕಾಲೇಜಿನ ಪ್ರಭಾರ ಪ್ರಾಂಶುಪಾಲ ಸೂರಜ್ ಚಾರ್ಲ್ಸ್ ನ್ಯೂನೆಸ್ ಸ್ವಾಗತಿಸಿ, ಉಪನ್ಯಾಸಕ ವಸಂತ್ ಶೆಟ್ಟಿ ವಂದಿಸಿ, ಕಾರ್ಯಕ್ರಮ ನಿರೂಪಿಸಿದರು.

ಫಲಿತಾಂಶ: ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜು ಮಡಂತ್ಯಾರು ಪ್ರಥಮ ಸ್ಥಾನ ಹಾಗೂ ಎಸ್.ಡಿ.ಎಂ ಪಿಯು ಕಾಲೇಜು ಉಜಿರೆ ದ್ವಿತೀಯ ಸ್ಥಾನ ಪಡೆಯಿತು.

ಸಮಾರೋಪ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಭಾರ ಪ್ರಾಂಶುಪಾಲ ಸೂರಜ್ ಚಾರ್ಲ್ಸ್ ನ್ಯೂನೆಸ್ ಬಹುಮಾನ ವಿತರಿಸಿದರು.ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡೆನ್ನಿಸ್ ಫೆರ್ನಾಂಡಿಸ್ ಹಾಗೂ ಸಂಜಿತ್ ಕುಮಾರ್ ಶೆಟ್ಟಿ, ಸೇಕ್ರೆಡ್ ಹಾರ್ಟ್ ಪದವಿ ಕಾಲೇಜಿನ ದೈಹಿಕ ಶಿಕ್ಷಣ ಶಿಕ್ಷಕ ಪಂದ್ಯಾಟದ ಯಶಸ್ಸಿಗೆ ಸಹಕರಿಸಿದರು.

LEAVE A REPLY

Please enter your comment!
Please enter your name here