ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಿಡ್ಲೆ, ಪೆರ್ಲ, ಕೊಕ್ಕಡ ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ ಸೆ.10ರಂದು ಜರುಗಿತು.
ತ್ರೋಬಲ್ ಪಂದ್ಯಾಟದ ಉದ್ಘಾಟನಾ ಕಾರ್ಯಕ್ರಮವನ್ನು ಸ್ಥಳೀಯ ಪ್ರಗತಿಪರ ಕೃಷಿಕ ಚಿತ್ತರಂಜನ್ ಜೈನ್ ರವರು ದೀಪ ಪ್ರಜ್ವಲನ ಮಾಡುವುದರ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ದೈಹಿಕ ಶಿಕ್ಷಣ ಶಿಕ್ಷಕ ಶೀನಾ, ವಲಯ ಸಂಘಟಕರಾದ ವಿಲ್ಫ್ರೆಡ್, ಶಾಲೆಯ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಟಿಕ್ಕ ಸಾಹೇಬ್, ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪಗೌಡ ರವರು ಉಪಸ್ಥಿತರಿದ್ದರು.
ಕ್ರೀಡಾಕೂಟಕ್ಕೆ ಚಾಲನೆಯನ್ನು ನೀಡಿದ ಚಿತ್ತರಂಜನ್ ಜೈನ್ ರವರು ಕ್ರೀಡಾಕೂಟಕ್ಕೆ ಶುಭ ಹಾರೈಸಿದರು.ಈ ಸಂದರ್ಭದಲ್ಲಿ ದೈಹಿಕ ಶಿಕ್ಷಣ ಶಿಕ್ಷಕ ಶೀನಾ ರವರನ್ನು ಗೌರವಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲೆಯ ಮುಖ್ಯ ಶಿಕ್ಷಕರ ಶೀನಪ್ಪಗೌಡರವರು ಆಟದಲ್ಲಿ ಸೋಲು ಗೆಲುವು ಸಾಮಾನ್ಯ, ಕ್ರೀಡಾ ಸ್ಪೂರ್ತಿಯಿಂದ ಎಲ್ಲಾ ವಿದ್ಯಾರ್ಥಿಗಳು ಒಳ್ಳೆಯ ರೀತಿಯಲ್ಲಿ ಆಟವನ್ನು ಆಡಿ ಇವತ್ತಿನ ಕ್ರೀಡಾಕೂಟವನ್ನು ಯಶಸ್ವಿಗೊಳಿಸಿ ಕೊಡಬೇಕಾಗಿ ಕೇಳಿಕೊಂಡರು.
ವಿದ್ಯಾರ್ಥಿಗಳ ಪ್ರಾರ್ಥನೆ ಗೀತೆಯೊಂದಿಗೆ ಪ್ರಾರಂಭಗೊಂಡ ಈ ಒಂದು ಕಾರ್ಯಕ್ರಮದಲ್ಲಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಶೀಲಾ ಸ್ವಾಗತಿಸಿ, ಪುಷ್ಪಲತಾ ರವರು ಧನ್ಯವಾದಿಸಸಸಿ, ಪವನ್ ಕುಮಾರ್ ನಿರೂಪಿಸಿದರು.ಈ ಒಂದು ಕ್ರೀಡಾಕೂಟದ ಹುಡುಗರ ವಿಭಾಗದ ತ್ರೋಬಾಲ್ ನಲ್ಲಿ ಪ್ರಥಮ ಸ್ಥಾನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬರಂಗಾಯ. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ದ್ವಿತೀಯ ಸ್ಥಾನ ಪಡೆದುಕೊಂಡಿತು.
ಬಾಲಕಿಯರ ವಿಭಾಗದಲ್ಲಿ ತ್ರೋಬಾಲ್ ನಲ್ಲಿ ಪ್ರಥಮ ಸ್ಥಾನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬರೆಂಗಾಯ, ದ್ವಿತೀಯ ಸ್ಥಾನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಸಮಾರೋಪ ಸಮಾರಂಭದ ಅತಿಥಿಗಳನ್ನು ಶಾಲಾ ಮುಖ್ಯ ಶಿಕ್ಷಕ ಶೀನಪ್ಪಗೌಡ ರವರು ಸ್ವಾಗತಿಸಿದರು, ನಿಶಾಂತ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಈ ಸಂದರ್ಭದಲ್ಲಿ ಶಾಲೆಯ ಎಲ್ಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಸಹಕಾರವನ್ನು ನೀಡಿದರು.