ಉಜಿರೆ: ಅನುಗ್ರಹ ಶಾಲೆಯಲ್ಲಿ ನಡೆದ ಕೊಕ್ಕಡ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಧರ್ಮಸ್ಥಳ ಶ್ರೀ ಧ ಮ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಬಹುಮಾನವನ್ನು ಪಡೆದಿರುತ್ತಾರೆ.
ಕನ್ನಡ ಭಾಷಣ ಸ್ಪರ್ಧೆಯಲ್ಲಿ ಒಂಬತ್ತನೇ ತರಗತಿಯ ಮಹಿಮಾ, ಸಂಸ್ಕೃತ ಭಾಷಣ ಸ್ಪರ್ಧೆಯಲ್ಲಿ ಹತ್ತನೇ ತರಗತಿಯ ಸ್ಮೃತಿ, ಮಿಮಿಕ್ರಿ ಸ್ಪರ್ಧೆಯಲ್ಲಿ ಹತ್ತನೇ ತರಗತಿಯ ಮನ್ವಿತ್ ಎಸ್, ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ಒಂಬತ್ತನೇ ತರಗತಿಯ ಮಾಧುರ್ಯ ಪ್ರಥಮ ಸ್ಥಾನ ಗಳಿಸಿ ತಾಲೂಕು ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ. ಆದರ್ಶ್ ಹೆಚ್ ವೈ, ಹಿತೇಶ್, ಧೀಮಂತ್, ಜೋಶ್ವ, ಚಿರಂತನ್, ಕ್ಷಿತೀಶ್ ಇವರನ್ನೊಳಗೊಂಡ ತಂಡವು ಕವ್ವಾಲಿ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿ ತಾಲೂಕು ಮಟ್ಟಕ್ಕೆ ಆಯ್ಕೆ ಆಗಿರುತ್ತದೆ.
ಧಾರ್ಮಿಕ ಪಠಣ ಸಂಸ್ಕೃತದಲ್ಲಿ ಒಂಬತ್ತನೇ ತರಗತಿಯ ಮಧುರ್ ಖರೆ, ಭಾವಗೀತೆ ಸ್ಪರ್ಧೆಯಲ್ಲಿ ಎಂಟನೇ ತರಗತಿಯ ಪ್ರಾಪ್ತಿ ಶೆಟ್ಟಿ, ಚಿತ್ರಕಲೆ ಸ್ಪರ್ಧೆಯಲ್ಲಿ ಹತ್ತನೇ ತರಗತಿಯ ವೃಕ್ಷಾಲಿ, ರಂಗೋಲಿ ಸ್ಪರ್ಧೆಯಲ್ಲಿ ಒಂಬತ್ತನೇ ತರಗತಿಯ ಆಶ್ರಿತ ತೃತೀಯ ಸ್ಥಾನ ಗಳಿಸಿರುತ್ತಾರೆ.