ಉಜಿರೆ: ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಎಂಡೋವೆನಸ್ ಲೇಸರ್ ಯಶಸ್ವಿ ಶಸ್ತ್ರಚಿಕಿತ್ಸೆ

0

ಉಜಿರೆ: ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಬ್ಬಿರುವ ರಕ್ತನಾಳದ ಸಮಸ್ಯೆ ಇರುವ 41 ವರ್ಷ ಹಾಗೂ 50 ವರ್ಷ ಪ್ರಾಯದ ಇಬ್ಬರಿಗೆ ಮೊದಲ ಬಾರಿಗೆ ಎಂಡೋವೆನಸ್ ಲೇಸರ್ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ.

ಶಸ್ತ್ರಚಿಕಿತ್ಸಾ ತಜ್ಞರಾದ ಡಾ| ಕಿರಣ್ ಹಾಗೂ ಅರೆವಳಿಕೆ ತಜ್ಞರಾದ ಡಾ| ಚೈತ್ರಾ ಆರ್ ಶಸ್ತ್ರಚಿಕಿತ್ಸೆಯನ್ನು ನಡೆಸಿದರು. ಶಸ್ತ್ರಚಿಕಿತ್ಸೆಗೆ ಒಳಗಾದ ಇಬ್ಬರು ರೋಗಿಗಳು ಕೂಡ ಅತೀ ಕಡಿಮೆ ಅವಧಿಯಲ್ಲಿ ಚೇತರಿಸಿಕೊಂಡಿದ್ದಾರೆ.

ಎಂಡೋವೆನಸ್ ಲೇಸರ್ ಶಸ್ತ್ರಚಿಕಿತ್ಸೆ ಎನ್ನುವುದು ಶಸ್ತ್ರಚಿಕಿತ್ಸೆ ಇಲ್ಲದೆ ಉಬ್ಬಿರುವ ರಕ್ತನಾಳಗಳಿಗೆ ನೀಡುವ ಚಿಕಿತ್ಸೆಯ ಹೊಸ ವಿಧಾನವಾಗಿದೆ. ಉಬ್ಬಿರುವ ರಕ್ತನಾಳಗಳನ್ನು ತೊಡೆದು ಹಾಕಲು ಇದು ಸುರಕ್ಷಿತ ಮತ್ತು ಪರಿಣಾಮಕಾರಿ ಚಿಕಿತ್ಸೆಯಾಗಿದೆ. ಈ ಚಿಕಿತ್ಸೆಯ ನಂತರ ರೋಗಿ ಬಹಳ ಬೇಗನೇ ಚೇತರಿಸಿಕೊಳ್ಳುತ್ತಾರೆ. ಈ ಶಸ್ತ್ರಚಿಕಿತ್ಸೆಯಲ್ಲಿ ಕಡಿಮೆ ನೋವು, ಕಡಿಮೆ ರಕ್ತಸ್ರಾವ ಹಾಗೂ ಸೋಂಕಿನ ಅಪಾಯ ತುಂಬಾ ಕಡಿಮೆ ಇರುತ್ತದೆ.

ಉಜಿರೆಯ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಟಿ ಆಸ್ಪತ್ರೆಯಲ್ಲಿ ಅತ್ಯಾಧುನಿಕ ವೈದ್ಯಕೀಯ ಸೇವೆ ದೊರೆಯುತ್ತಿದೆ. ನಗರ ಪ್ರದೇಶದ ಅಸ್ಪತ್ರೆಗಳಿಗೆ ಹೋಲಿಸಿದರೆ ಈ ಆಸ್ಪತ್ರೆಯಲ್ಲಿ ಅತ್ಯಂತ ಕಡಿಮೆ ದರದಲ್ಲಿ ಶಸ್ತ್ರಚಿಕಿತ್ಸೆಗಳನ್ನು ಮಾಡಲಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ನಡೆಯುತ್ತಿರುವ ಯಶಸ್ವಿ ಶಸ್ತ್ರಚಿಕಿತ್ಸೆಗಳ ಬಗ್ಗೆ ಡಾ| ಡಿ. ವೀರೇಂದ್ರ ಹೆಗ್ಗಡೆ, ಹೇಮಾವತಿ ವಿ. ಹೆಗ್ಗಡೆಯವರು ಹಾಗೂ ಡಿ. ಹರ್ಷೇಂದ್ರ ಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದರು ಎಂದು ವ್ಯವಸ್ಥಾಪಕ ನಿರ್ದೇಶಕ ಎಂ.ಜನಾರ್ದನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here