ನಾರಾವಿ: ಸಂತ ಅಂತೋನಿ ಪದವಿ ಕಾಲೇಜು ವಿದ್ಯಾರ್ಥಿ ಸಂಘದ ಉದ್ಘಾಟನೆ

0

ನಾರಾವಿ: ಸಂತ ಅಂತೋನಿ ಪದವಿ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘವು ಕಾಲೇಜು ಸಭಾಂಗಣದಲ್ಲಿ ಉದ್ಘಾಟನೆಗೊಂಡಿತು. ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಮಾತನಾಡಿದ ಸಂತ ಅಂತೋನಿ ಶಿಕ್ಷಣ ಸಂಸ್ಥೆಗಳ ನೂತನ ಸಂಚಾಲಕ ವಂ.ಸ್ವಾ.ಜೆರೋಮ್ ಡಿ’ಸೋಜ ವಿದ್ಯಾರ್ಥಿ ಸಂಘದ ಜವಾಬ್ದಾರಿಯನ್ನು ತಿಳಿಯಪಡಿಸಿದರು.

ಕಾಲೇಜಿನ ಪ್ರಾಂಶುಪಾಲ ವಂ.ಡಾ.ಆಲ್ವಿನ್ ಸೆರಾವೋ ನೂತನವಾಗಿ ಆಯ್ಕೆಯಾದ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸುವುದರೊಂದಿಗೆ, ವಿದ್ಯಾರ್ಥಿಯಾದವನು ನಾಯಕತ್ವವನ್ನು ಹೊಂದಲು ಇರಬೇಕಾದ ಕೌಶಲ್ಯಗಳ ಕುರಿತು ಮಾತಾಡಿದರು. ವೇದಿಕೆಯಲ್ಲಿ ವಿದ್ಯಾರ್ಥಿ ಸಂಘದ ನಿರ್ದೇಶಕ ಸಂತೋಷ್ ಸಲ್ದಾನ, ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ಕುಮಾರಿ ಶರಣ್ಯ, ಉಪಾಧ್ಯಕ್ಷರಾಗಿ ಆಯ್ಕೆಯಾದ ದಿಶಾಂತ್ ಕುಮಾರ್ ಹಾಗೂ ಕಾರ್ಯದರ್ಶಿಯಾಗಿ ಆಯ್ಕೆಯಾದ ಕುಮಾರಿ ಅನ್ವಿತಾ ರಾವ್ ಉಪಸ್ಥಿತರಿದ್ದರು.

ಪದವಿ ಕಾಲೇಜಿನ ವಾಣಿಜ್ಯ ಉಪನ್ಯಾಸಕ ಅವಿನಾಶ್ ಲೋಬೋ ಕಾರ್ಯಕ್ರಮವನ್ನು ನಿರೂಪಿಸಿ, ಸಂತೋಷ್ ಧನ್ಯವಾದವಿತ್ತರು.

LEAVE A REPLY

Please enter your comment!
Please enter your name here