ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರಿಗೆ ‘ಕಲಿಕೆಯಲ್ಲಿ ಕಲೆ’ ಕಾರ್ಯಾಗಾರ

0

ಉಜಿರೆ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರಿಗೆ ‘ಕಲಿಕೆಯಲ್ಲಿ ಕಲೆ’ ಕಾರ್ಯಗಾರ ನಡೆಯಿತು.ಸಂಪನ್ಮೂಲ ವ್ಯಕ್ತಿಯಾಗಿ ಬ್ರಹ್ಮಾವರದ ಎಸ್.ಎಮ್.ಎಸ್ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲೆ ಅಭಿಲಾಷ ಕಲಿಕೆಯಲ್ಲಿ ಕಲೆಯನ್ನು ಅಳವಡಿಸುವ ವಿಷಯಗಳ ಕುರಿತಾಗಿ ಪ್ರಾಯೋಗಿಕ ಮಾಹಿತಿ ಹಂಚಿಕೊಂಡರು.

ವಿಶೇಷವಾಗಿ ನಾಟಕ ಪೂರ್ವರಂಗದ ಮೂಲಕ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳು ಸಂಪನ್ಮೂಲ ವ್ಯಕ್ತಿಗಳನ್ನು ಸ್ವಾಗತಿಸಿ, ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. 

ಕಾರ್ಯಗಾರದಲ್ಲಿ ಅಭಿಲಾಷ ಅವರ ವಿದ್ಯಾರ್ಥಿನಿ ಕಾವ್ಯ ಹಂದೆ ತರಗತಿಗಳಲ್ಲಿ ಮಾಡಬಹುದಾದ ಅನೇಕ ಚಟುವಟಿಕೆಗಳು ಹಾಗೂ ನಾಟಕಗಳನ್ನು ಪ್ರಾತ್ಯಕ್ಷಿಕೆಯ ಮೂಲಕ ಮಾಡಿತೋರಿಸಿದರು.ಕಾರ್ಯಗಾರದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ವಿವಿಧ ಸಿ.ಬಿ.ಎಸ್.ಇ ಶಾಲೆಗಳ ಶಿಕ್ಷಕರು ಭಾಗವಹಿಸಿದರು.

ಶಿಕ್ಷಕಿ ಕಲ್ಯಾಣಿ ರಾವ್ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here