


ನಿಡ್ಲೆ: ಸರ್ಕಾರಿ ಪ್ರೌಢಶಾಲೆಯಲ್ಲಿ ಹಿರಿಯ ವಿದ್ಯಾರ್ಥಿ ಸಂಘದ ಸಮ್ಮಿಲನ ಕಾರ್ಯಕ್ರಮ ಸೆ.14ರಂದು ನಡೆಯಿತು.ಅನೇಕ ಹಿರಿಯ ವಿದ್ಯಾರ್ಥಿಗಳು ಪರಸ್ಪರ ತಮ್ಮ ಪರಿಚಯದೊಂದಿಗೆ ಶಾಲೆಯಲ್ಲಿ ಕಲಿತ ದಿನಗಳನ್ನು ಮೆಲಕು ಹಾಕಿದರು. ಇದೇ ಸಂದರ್ಭದಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.
ಅಧ್ಯಕ್ಷರಾಗಿ ರಾಜ ಗುರು ಹೆಬ್ಬಾರ್, ಉಪಾಧ್ಯಕ್ಷರಾಗಿ ಕೃಷ್ಣ ಪ್ರಸಾದ್, ಕಾರ್ಯದರ್ಶಿಯಾಗಿ ಜಗದೀಶ ಶೆಟ್ಟಿ, ಉಪ ಕಾರ್ಯದರ್ಶಿಯಾಗಿ ಯುವರಾಜ ಕೋಶಾಧಿಕಾರಿ ಬಾಲಕೃಷ್ಣ ಶೆಟ್ಟಿ, ಪದನಿಮಿತ್ತ ಕಾರ್ಯದರ್ಶಿಯಾಗಿ ಮುಖ್ಯ ಶಿಕ್ಷಕ ಶಾಂತ ಶೆಟ್ಟಿ ಜವಾಬ್ದಾರಿ ವಹಿಸಿಕೊಂಡರು.


ಈ ಸಂದರ್ಭದಲ್ಲಿ ಆಂಗ್ಲ ಭಾಷಾ ಶಿಕ್ಷಕಿ ಶೋಲಿ ಇವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಲಾ ಸುವರ್ಣ ಸಂಭ್ರಮದಿಂದ 10 ವರ್ಷಗಳ ಕಾಲ ಸಂಘದ ಅಧ್ಯಕ್ಷರಾಗಿದ್ದ ಲಕ್ಷ್ಮೀ ನಾರಾಯಣ ಭಟ್ ಶುಭ ಹಾರೈಸಿದರು. ನೂತನ ಅಧ್ಯಕ್ಷ ರಾಜಗುರು ಹೆಬ್ಬಾರ್ ಅವರು ಎಲ್ಲರ ಸಹಕಾರವನ್ನು ಕೋರಿದರು.
ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಪುರುಷೋತ್ತಮ ಗೌಡ ಇವರು ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಗುರುಗಳಾದ ಶಾಂತಾ ಸ್ವಾಗತಿಸಿ, ಸುಚಿತ್ರ ಧನ್ಯವಾದವಿತ್ತರು. ಶರತ್ ಕುಮಾರ್ ತುಳುಪುಳೆ ನಿರೂಪಿಸಿ, ಎಸ್ ಡಿಎಂಸಿ ಸದಸ್ಯರು, ಶಾಲಾ ಶಿಕ್ಷಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.









