ಬೆಳ್ತಂಗಡಿ: ವಿಜಯ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿಯ ವಾರ್ಷಿಕ ಮಹಾಸಭೆ ಸೆ.15ರಂದು ಬೆಳ್ತಂಗಡಿ ಬಂಟರ ಭವನದಲ್ಲಿ ಸಂಘದ ಅಧ್ಯಕ್ಷ ಎಸ್.ಜಯರಾಮ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ಜರಗಿತು.
ವಾರ್ಷಿಕ ವರದಿ ಹಾಗೂ ಲೆಕ್ಕಪತ್ರಗಳನ್ನು ಬ್ಯಾಂಕಿನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಸುಜಯ್ ಶೆಟ್ಟಿ ಮಂಡನೆ ಮಾಡಿದ್ದು, ಸಂಘವು 2023-24ನೇ ಸಾಲಿನಲ್ಲಿ 721 ಕೋಟಿ ವ್ಯವಹಾರ ನಡೆಸಿದ್ದು, ರೂ.2 ಕೋಟಿ ನಿವ್ವಳ ಲಾಭ ಗಳಿಸಿರುವ ಬಗ್ಗೆ ಮಾಹಿತಿ ನೀಡಿದರು. ಇದೇ ಸಂದರ್ಭದಲ್ಲಿ ಸಂಘದ ಸದಸ್ಯರಿಗೆ ಶೇಕಡಾ 18 ಡಿವಿಡೆಂಡ್ ಘೋಷಣೆ ಮಾಡಲಾಯಿತು.
ವೇದಿಕೆಯಲ್ಲಿ ನಿರ್ದೇಶಕರಾದ ಸೀತಾರಾಮ ಶೆಟ್ಟಿ, ನಾರಾಯಣ ಶೆಟ್ಟಿ, ಬಾಲಕೃಷ್ಣ ಪೂಂಜ, ಜಯರಾಮ ಭಂಡಾರಿ, ಪುರಂದರ ಶೆಟ್ಟಿ, ಅಂಬಾ ಬಿ.ಆಳ್ವ, ಸಾರಿಕಾ ಡಿ.ಆಳ್ವ, ಕೃಷ್ಣ ಶೆಟ್ಟಿ ಹಾಗೂ ಬ್ಯಾಂಕಿನ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಸಿಬ್ಬಂದಿ ಸವಿತಾ ಹಾಗೂ ರಂಜನ್ ಪ್ರಾರ್ಥಿಸಿದರು.ನಿರ್ದೇಶಕ ರಘುರಾಮ ಶೆಟ್ಟಿ ಸ್ವಾಗತಿಸಿ, ನಿರ್ದೇಶಕ ಜಯಂತ ಶೆಟ್ಟಿ ಧನ್ಯವಾದವಿತ್ತರು.
p>