ಅರಸಿನಮಕ್ಕಿ: ಸರಕಾರಿ ಪದವಿ ಪೂರ್ವ ಕಾಲೇಜಿನ ಶೌಚಾಲಯ ಕಟ್ಟಡಕ್ಕೆ ಶಿಲಾನ್ಯಾಸವನ್ನು ಸೆ.19ರಂದು ಪಂಚಾಯತ್ ಮತ್ತು ಶಾಲಾ ಅಭಿವೃದ್ಧಿ ಸಮಿತಿಯವರು ನೆರವೇರಿಸಿದರು.
ಶಿಕ್ಷಣ ಇಲಾಖೆ ಮತ್ತು ಪಂಚಾಯತ್ ಉದ್ಯೋಗ ಖಾತರಿ ಯೋಜನೆಯ ಮೂಲಕ ಶೌಚಾಲಯಕ್ಕೆ 5.20 ಲಕ್ಷ ದೊರೆತಿದ್ದು ಶೀಘ್ರದಲ್ಲಿ ನಿರ್ಮಾಣದ ಕೆಲಸ ಆರಂಭವಾಗಲಿದೆ ಎಂದು ಪಂಚಾಯತ್ ಉಪಾಧ್ಯಕ್ಷ ಸುಧೀರ್ ಕುಮಾರ್ ಎಂ ಎಸ್ ತಿಳಿಸಿದರು.
ಶಿಲಾನ್ಯಾಸ ಸಂಧರ್ಭದಲ್ಲಿ ಪಂಚಾಯತ್ ಅಧ್ಯಕ್ಷರಾದ ಗಾಯತ್ರಿ, ಉಪಾಧ್ಯಕ್ಷರಾದ ಸುಧೀರ್ ಕುಮಾರ್ ಎಂ ಎಸ್ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಗಣೇಶ್, ಪಂಚಾಯತ್ ಸದಸ್ಯರಾದ ಲಾವಣ್ಯ, ಶಕುಂತಲಾ, ಪುಷ್ಪ, ಜನಾರ್ಧನ ಕಾಲೇಜ್ ಪ್ರಿನ್ಸಿಪಾಲ್ ರಾಮಯ್ಯ ಶೆಟ್ಟಿ, ಶಾಲಾ ಮುಖ್ಯ ಶಿಕ್ಷಕರು, ಗಣೇಶ್ ಕೆ, ಮುರಳಿಧರ್ ಶೆಟ್ಟಿಗಾರ್, ಶ್ರೀಕಾಂತ್ ಉಪಸ್ಥಿತರಿದ್ದರು.
p>