ಮಲವಂತಿಗೆಯ ಎಳನೀರುವಿನ ಶಶಿಕಾಂತ್ ವೈರಿಗೆ ರಾಜ್ಯ ಉತ್ತಮ ಶಿಕ್ಷಕ ಪ್ರಶಸ್ತಿ

0

ಬೆಳ್ತಂಗಡಿ: ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ನೀಡಲಾಗುವ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಮೂಡುಬಿದಿರೆ ದಿಗಂಬರ ಜೈನ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಶಶಿಕಾಂತ್ ವೈ ಆಯ್ಕೆಯಾಗಿದ್ದು.

ಮೂಲತಃ ಶಶಿಕಾಂತ್ ವೈರವರು ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಎಳನೀರು ನಿವಾಸಿಯಾಗಿದ್ದಾರೆ.

ಸೆಪ್ಟಂಬರ್ 14ರಂದು ಬೆಂಗಳೂರಿನ ಶಿಕ್ಷಕರ ಸದನದ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಸಚಿವರಾದ ಮಧು ಬಂಗಾರಪ್ಪ ಪ್ರಶಸ್ತಿ ಪ್ರದಾನ ಮಾಡಿದರು.

LEAVE A REPLY

Please enter your comment!
Please enter your name here