ಪತ್ರಿಕಾಗೋಷ್ಠಿ- ಅ.2: ಯೋಧ ಮಂಜುನಾಥರಿಗೆ ಮತ್ತು ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ವಿ.ಕೆ ವಿಟ್ಲರಿಗೆ ನಾಗರಿಕ ಅಭಿನಂದನಾ ಸಮಾರಂಭ

0

ಬೆಳ್ತಂಗಡಿ: ಭಾರತೀಯ ಭೂಸೇನೆಯಲ್ಲಿ ಸುದೀರ್ಘ 24 ವರ್ಷ ಭಾರತ ಮಾತೆಯ ಸೇವೆಗೈದು ವೃತ್ತಿಯಿಂದ ನಿವೃತ್ತಿ ಹೊಂದಿ ತಾಯ್ನಾಡಿಗೆ ಆಗಮಿಸುತ್ತಿರುವ ಹೆಮ್ಮೆಯ ಯೋಧ ಮಂಜುನಾಥರವರಿಗೆ ಹಾಗೂ ಗುರುವಾಯನಕೆರೆ ಪ್ರೌಢಶಾಲೆಯ ಚಿತ್ರಕಲಾ ಶಿಕ್ಷಕ, “ಕರ್ನಾಟಕ ರಾಜ್ಯದ ಅತ್ಯುತ್ತಮ ಶಿಕ್ಷಕ” ಪ್ರಶಸ್ತಿಯನ್ನು ಪಡೆದ ವಿಶ್ವನಾಥ ಗೌಡ (ವಿ.ಕೆ. ವಿಟ್ಲ)ರವರಿಗೆ ಅ.2ರಂದು ನಾಗರಿಕ ಅಭಿನಂದನಾ ಸಮಿತಿಯಿಂದ ಮದ್ದಡ್ಕ ಸಮುದಾಯ ಭವನದಲ್ಲಿ 34 ಸ್ಥಳೀಯ ಸಂಘ ಸಂಸ್ಥೆಗಳ ವತಿಯಿಂದ ನಾಗರಿಕ ಅಭಿನಂದನಾ ಸಮಾರಂಭ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಸಂಪತ್ ಸುವರ್ಣ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದ್ದಾರೆ.

ಬೆಳಗ್ಗೆ 9ಕ್ಕೆ ಲಾಯಿಲ ಶ್ರೀ ವೆಂಕಟರಮಣ ದೇವಸ್ಥಾನದಿಂದ ಕಿನ್ನಿಗೋಳಿಯವರೆಗೆ ಯೋಧರನ್ನು ತೆರೆದ ವಾಹನದಲ್ಲಿ ಭವ್ಯ ಮೆರವಣಿಗೆಯೊಂದಿಗೆ ಸ್ವಾಗತಿಸಿ ಮತ್ತು ಬೆಳಗ್ಗೆ 10ಕ್ಕೆ ಮದ್ದಡ್ಕ-ಕಿನ್ನಿಗೋಳಿಯಿಂದ ಭವ್ಯ ಮೆರವಣಿಗೆಯಲ್ಲಿ “ಸೈನಿಕ-ಶಿಕ್ಷಕ”ರನ್ನು ಸಭಾಂಗಣಕ್ಕೆ ಕರೆ ತರಲಾಗುವುದು ಎಂದರು.

ಪತ್ರಿಕಾಗೋಷ್ಟಿಯಲ್ಲಿ ಮಾಜಿ ಶಾಸಕ, ಅಭಿನಂದನಾ ಸಮಿತಿಯ ಗೌರವಾಧ್ಯಕ್ಷ ಕೆ.ಪ್ರಭಾಕರ ಬಂಗೇರ, ನಿವೃತ್ತ ಸೈನಿಕ ಟಿ.ರಾಮ ಭಟ್, ಮದ್ದಡ್ಕ ಜುಮ್ಮಾ ಮಸೀದಿಯ ಅಧ್ಯಕ್ಷ ಅಶ್ರಫ್ ಚಿಲಿಂಬಿ, ಪ್ರಧಾನ ಸಂಚಾಲಕ ಪ್ರಭಾಕರ ಶೆಟ್ಟಿ ಉಪ್ಪಡ್ಕ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here