ಸೆ.25ರಿಂದ ಅ.8: ನಾವೂರುನಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

0

ಬೆಳ್ತಂಗಡಿ: ನಾವೂರು ಗ್ರಾಮ ಪಂಚಾಯತ್ ಮತ್ತು ಹಾಲು ಉತ್ಪಾದಕರ ಸೇವಾ ಸಹಕಾರಿ ಸಂಘ ನಾವೂರು ಇದರ ಜಂಟಿ ಆಶ್ರಯದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರವು ಸೆ. 25ರಿಂದ ಅ.8 ರವರೆಗೆ ಹಾಲು ಉತ್ಪಾದಕರ ಸೇವಾ ಸಹಕಾರಿ ಸಂಘದ ಅಮೃತ ಸಭಾಭವನದಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಡಾ| ಪ್ರದೀಪ್‌ ಆರೋಗ್ಯ ಕ್ಲಿನಿಕ್ ನಾವೂರು ನೆರವೇರಿಸಲಿದ್ದಾರೆ.

ಅಧ್ಯಕ್ಷತೆಯನ್ನು ನಾವೂರು ಗ್ರಾಮ ಪಂಚಾಯತ್‌ ಅಧ್ಯಕ್ಷೆ ಸುನಂದಾ ವಹಿಸಲಿದ್ದಾರೆ. ಪುತ್ತೂರು ನೆಮ್ಮದಿ ವೆಲ್‌ನೆಸ್ ಸೆಂಟ‌ರ್ ಮಾಲಕ ಕೆ.ಪ್ರಭಾಕರ ಸಾಲ್ಯಾನ್ ಮಾಹಿತಿ ನೀಡಲಿದ್ದಾರೆ.

ಮುಖ್ಯ ಅತಿಥಿಗಳಾಗಿ ನಾವೂರು ಹಾಲು ಉತ್ಪಾದಕರ ಸೇವಾ ಸಹಕಾರಿ ಸಂಘ ಅಧ್ಯಕ್ಷ ಉಮೇಶ್ ಪ್ರಭು ಹಡಿಲು, ಬಂಗಾಡಿ ಸಿ ಎ ಬ್ಯಾಂಕ್‌ ಅಧ್ಯಕ್ಷ ಹರೀಶ್ ಸಾಲಿಯಾನ್ ಮೊರ್ತಾಜೆ, ನಾವೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಪ್ರಿಯಾ ಲಕ್ಷ್ಮಣ, ನಾವೂರು ಗ್ರಾಮ ಪಂಚಾಯತ್ ಪಿಡಿಒ ವಸಂತ ಪೂಜಾರಿ ಭಾಗವಹಿಸಲಿದ್ದಾರೆ.

ಶಿಬಿರವು ಪ್ರತಿ ದಿನ ಪೂರ್ವಾಹ್ನ 10.00 ರಿಂದ ಅಪರಾಹ್ನ 4-00 ರವರೆಗೆ ನಡೆಯಲಿದೆ.

LEAVE A REPLY

Please enter your comment!
Please enter your name here