


ನಾವೂರು: ಹಾಲು ಉತ್ಪಾದಕರ ಸೇವಾ ಸಹಕಾರಿ ಸಂಘದ ಅಮೃತ ಸಭಾಭವನದಲ್ಲಿ ನಾವೂರು ಗ್ರಾಮ ಪಂಚಾಯತ್ ಮತ್ತು ಹಾಲು ಉತ್ಪಾದಕರ ಸಹಕಾರಿ ಸಂಘ ನಾವೂರು ಇವರ ಜಂಟಿ ಆಶ್ರಯದಲ್ಲಿ ಉಚಿತ ಪೂಟ್ ಫಲ್ಸ್ ಥೆರಪಿ ಶಿಬಿರ ಸೆ.25ರಂದು ನಡೆಯಿತು.



ಉದ್ಘಾಟನಾ ಕಾರ್ಯಕ್ರಮವನ್ನು ನಾವೂರು ಆರೋಗ್ಯ ಕ್ಲಿನಿಕ್ ನ ಡಾ.ಪ್ರದೀಪ್ ನಡೆಸಿದರು. ಸದ್ರಿ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ನ ಅಧ್ಯಕ್ಷೆ ಸುನಂದ, ಉಪಾಧ್ಯಕ್ಷೆ ಮಮತಾ, ಗ್ರಾಮ ಪಂಚಾಯತ್ ಸದಸ್ಯರಾದ ಗಣೇಶ್ ಗೌಡ, ವೇದಾವತಿ, ಎನ್.ಕೆ.ಹಸೈನಾರ್, ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಉಮೇಶ ಪ್ರಭು, ನೆಮ್ಮದಿ ವೆಲ್ ನೆಸ್ ಸೆಂಟರ್ ಪುತ್ತೂರು ಇದರ ಮಾಲಕ ಕೆ.ಪ್ರಭಾಕರ ಸಾಲ್ಯಾನ್ ಮತ್ತು ಸಿಬ್ಬಂದಿ ವರ್ಗ, ಎಂ ಬಿ ಕೆ, ಎಲ್ ಸಿ ಆರ್ ಪಿ, ಸಿಬ್ಬಂದಿ ವರ್ಗ ಮತ್ತು ಗ್ರಾಮಸ್ದರು ಉಪಸ್ಧಿತರಿದ್ದರು.

ಗ್ರಾಮ ಪಂಚಾಯತ್ ಸದಸ್ಯ ಗಣೇಶ್ ಗೌಡ ಕಾರ್ಯಕ್ರಮವನ್ನು ನಿರೂಪಿಸಿ, ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಉಮೇಶ ಪ್ರಭು ಸ್ವಾಗತಿಸಿ, ಗ್ರಾಮ ಪಂಚಾಯತ್ ಸಿಬ್ಬಂದಿ ರಶ್ಮಿ ವಂದಿಸಿದರು.









