ಉಜಿರೆ: ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನಲ್ಲಿ ಮನೋವಿಜ್ಞಾನ ಸಂಘ ಉದ್ಘಾಟನೆ- ಮಾನಸಿಕ ಆರೋಗ್ಯದ ಬಗ್ಗೆ ತಪ್ಪು ಕಲ್ಪನೆ ಸಲ್ಲದು: ಕೃಷ್ಣಗೋಪಕುಮಾರ್

0

ಉಜಿರೆ: ಮನೋವಿಜ್ಞಾನ ಮತ್ತು ಮಾನಸಿಕ ಆರೋಗ್ಯದ ಬಗ್ಗೆ ಜನರಲ್ಲಿ ಅನೇಕ ತಪ್ಪು ಕಲ್ಪನೆಗಳಿವೆ. ಮನೋವಿಜ್ಞಾನದ ವಿದ್ಯಾರ್ಥಿಗಳಾಗಿ ಎಲ್ಲರ ಸರ್ವತೋಮುಖ ಬೆಳವಣಿಗೆ ಹಾಗೂ ಕಲ್ಯಾಣಕ್ಕಾಗಿ ತಪ್ಪು ಕಲ್ಪನೆಗಳನ್ನು ಹೋಗಲಾಡಿಸಬೇಕು ಎಂದು ಮಂಗಳೂರಿನ ಸೈಂಟ್ ಆಗ್ನೇಸ್ ಕಾಲೇಜಿನ ಪ್ರಾಧ್ಯಾಪಕಿ ಕೃಷ್ಣಗೋಪಕುಮಾರ್ ಹೇಳಿದರು.

ಅವರು ಸೆ.24ರಂದು ಉಜಿರೆಯಲ್ಲಿ ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನಲ್ಲಿ ಸ್ನಾತಕೋತ್ತರ ಹಾಗೂ ಮನೋವಿಜ್ಞಾನ ಸಂಶೋಧನಾ ಕೇಂದ್ರ ಆಯೋಜಿಸಿದ “ಪೀಸ್” ವಿದ್ಯಾರ್ಥಿ ಸಂಘ ಉದ್ಘಾಟಿಸಿ ಶುಭ ಹಾರೈಸಿದರು.

ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲ ಪ್ರೊ. ಕುಮಾರ ಹೆಗ್ಡೆ ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು. ನೂತನ ಸಂಘದ ಮೂಲಕ ಶಾಂತಿ ಕಾಪಾಡುವ ಕಾರ್ಯಗಳು ನಿರಂತರ ನಡೆಯಲಿ ಎಂದು ಆಶಿಸಿದರು.

ಮನೋವಿಜ್ಞಾನ ವಿಭಾಗದ ಮುಖ್ಯಸ್ಥ ಡಾ. ವಂದನಾ ಜೈನ್, ಕಾರ್ಯಕ್ರಮದ ಸಂಯೋಜಕಿ ಅಶ್ವಿನಿ ಶೆಟ್ಟಿ, ಡಾ. ಮಹೇಶ್‌ ಬಾಬು, ಅಶ್ವಿನಿ ಎಚ್. ಸಿಂಧು ವಿ., ಸಂಘದ ಅಧ್ಯಕ್ಷ ಅಲಿಷ ಪಿ. ಜಾಯ್ ಉಪಸ್ಥಿತರಿದ್ದರು.
ಕಾರ್ಯದರ್ಶಿ ಕುಮಾರಿ ಚೈತನ್ಯ ಸ್ವಾಗತಿಸಿದರು. ಕುಮಾರಿ ಕೀರ್ತನಾ ಧನ್ಯವಾದವಿತ್ತರು. ಕುಮಾರಿ ಸ್ಟಿನ್ಸಿ ಕಾರ್ಯಕ್ರಮ ನಿರ್ವಹಿಸಿದರು.

LEAVE A REPLY

Please enter your comment!
Please enter your name here