ಕೊಕ್ಕಡ ಗ್ರಾಮದ ಮಲ್ಲಿಗೆ ಮಜಲು ಎಂಬಲ್ಲಿ ಉಸ್ಮಾನ್ ಎಂಬ ವ್ಯಕ್ತಿಗೆ ಸೇರಿದ ಅಡಿಕೆ ತೋಟದಲ್ಲಿ ಅಕ್ರಮವಾಗಿ ಕಸಾಯಿಖಾನೆ ನಡೆಸುತ್ತಿದ್ದ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರಿಂದ ದಾಳಿ ಮಾಡಿದ ಘಟನೆ ಸೆ.26ರಂದು ಮದ್ಯಾಹ್ನ ನಡೆದಿದೆ.
ಸ್ಥಳದಲ್ಲಿ ಗೋಮಾಂಸವನ್ನು ಬಿಟ್ಟು ಆರೋಪಿಗಳು ಪರಾರಿಯಾಗಿದ್ದಾರೆ.ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಹಲವು ವರ್ಷಗಳಿಂದ ಇಂತಹ ದಂಧೆ ನಡೆಯುತ್ತಿದೆ ಎಂದು ಸಾರ್ವಜನಿಕರು ದೂರಿದ್ದಾರೆ.
ಈ ಸಂದರ್ಭದಲ್ಲಿ ಧರ್ಮಸ್ಥಳ ಠಾಣೆಯ ಸಬ್ ಇನ್ಸ್ಪೆಕ್ಟರ್ ಕಿಶೋರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಯಿತು.
10ಕಿಲೋ ಗ್ರಾಂ ಗೋಮಾಂಸ, ದೇಹದ ಇತರೆ ಭಾಗ, ಬ್ಯಾಟರಿ ಚಾಲಿತ ತೂಕದ ಯಂತ್ರ-1, ಚಾಕು, 5250 ಮೌಲ್ಯದ ವಸ್ತುಗಳು ವಶಕ್ಕೆ, ಉಸ್ಮಾನ್ ಮತ್ತು ಸಲೀಂ ಎಂಬುವವರ ವಿರುದ್ಧ ದೂರು.ಗೋಹತ್ಯೆ ನಿಷೇಧ ಕಾಯ್ದೆ, ಜಾನುವಾರು ಸಂರಕ್ಷಣಾ ಕಾಯ್ದೆಯಡಿಯಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
p>