ಬೆಳ್ತಂಗಡಿ: ಅ.21ರಂದು ನಡೆಯಲಿರುವ ವಿಧಾನಪರಿಷತ್ ಉಪಚುನಾವಣೆಗೆ ಸಂಬಂಧಿಸಿದಂತೆ ನಾಮಪತ್ರ ಸಲ್ಲಿಸಲು ಕೊನೇಯ ದಿನವಾಗಿರುವ ಅ.3ರಂದು ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಮತ್ತು ಕಾಂಗ್ರೆಸ್ ಅಭ್ಯರ್ಥಿ ರಾಜು ಎಸ್. ಪೂಜಾರಿ ಬೈಂದೂರು ಮಂಗಳೂರಿನಲ್ಲಿರುವ ದ.ಕ. ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಚುನಾವಣಾಧಿಕಾರಿಯೂ ಆಗಿರುವ ಮುಲ್ಲೈ ಮುಗಿಲನ್ ನಾಮಪತ್ರ ಸ್ವೀಕರಿಸಿದರು.
ಕಿಶೋರ್ ಕುಮಾರ್ ನಾಮಪತ್ರ ಸಲ್ಲಿಸುವ ವೇಳೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕರಾದ ಭಾಗೀರಥಿ ಮುರುಳ್ಯ, ಪ್ರತಾಪಸಿಂಹ ನಾಯಕ್, ಯಶಪಾಲ್ ಸುವಣ೯, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಉಪಸ್ಥಿತರಿದ್ದರು ರಾಜು ಎಸ್. ಪೂಜಾರಿ ಅವರು ನಾಮಪತ್ರ ಸಲ್ಲಿಸಿದ ಸಂದರ್ಭ ಮಾಜಿ ಸಚಿವರಾದ ಜಯಪ್ರಕಾಶ್ ಹೆಗ್ಡೆ, ರಮಾನಾಥ ರೈ, ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜಾ ಮತ್ತು ಮಂಜುನಾಥ ಭಂಡಾರಿ ಉಪಸ್ಥಿತರಿದ್ದರು.
p>