ಬೆಳ್ತಂಗಡಿ: ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

0

ಬೆಳ್ತಂಗಡಿ: ಲಾಯಿಲ ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 155ನೇ ವರ್ಷದ ಗಾಂಧಿ ಜಯಂತಿಯನ್ನು ಬಹಳ ಅರ್ಥಪೂರ್ಣವಾಗಿ ಆಚರಿಸಲಾಯಿತು.

ವಿದ್ಯಾರ್ಥಿಗಳ ಪ್ರಾರ್ಥನೆಯ ಬಳಿಕ, ಶಾಲಾ ಮುಖ್ಯ ಶಿಕ್ಷಕಿ ಸಿಸ್ಟರ್ ಪ್ರೀತಿ ಜಾರ್ಜ್ ಇವರು ಗಾಂಧೀಜಿ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರಿ ಇವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ದೇಶದ ಇಬ್ಬರು ಮಹಾನ್ ನಾಯಕರನ್ನು ಸ್ಮರಿಸಿದರು. ಬಳಿಕ ಶಾಲಾ ಸಹ ಶಿಕ್ಷಕಿ ಕುಸುಮಾ ಕೆ ಇವರು, ಗಾಂಧಿ ಜಯಂತಿಯ ಮಹತ್ವ ಹಾಗೂ ಆವರ ಕನಸನ್ನು ಸಾಕಾರಗೊಳಿಸುವಲ್ಲಿ ವಿದ್ಯಾರ್ಥಿಗಳ ಪಾತ್ರವನ್ನು ವಿವರಿಸಿ, ಅವರ ಸತ್ಯ, ಅಹಿಂಸೆ ಇವುಗಳು ನಮ್ಮೆಲ್ಲರಿಗೂ ದಾರಿದೀಪವಾಗಲಿ ಎಂದು ಹಾರೈಸಿದರು.

ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ಸ್ವಚ್ಛತಾ ಕಾರ್ಯಕ್ರಮವನ್ನು ನಡೆಸಲಾಯಿತು. ಕೊನೆಯಲ್ಲಿ ಸಿಹಿ ತಿಂಡಿ ವಿತರಣೆಯೊಂದಿಗೆ ಕಾರ್ಯಕ್ರಮವು ಪರಿಸಮಾಪ್ತಿಯಾಯಿತು.

LEAVE A REPLY

Please enter your comment!
Please enter your name here