ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

0

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಕ್ಟೋಬರ್ 2ರಂದು ಗಾಂಧಿ ಜಯಂತಿ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿ ಜಯಂತಿಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮವು ಪ್ರಾರ್ಥನಾ ಗೀತೆಯೊಂದಿಗೆ ಪ್ರಾರಂಭಗೊಂಡಿತು. ಶಾಲಾ ಸಹ ಶಿಕ್ಷಕಿಯಾದ ಕುಮಾರಿ ಜೀವಿತರವರು ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ  ಜಯಂತಿಯ ಮಹತ್ವವನ್ನು ವಿವರಿಸಿದ್ದರು.

ಶಾಲಾ ಸಂಚಾಲಕ ವಂ|ಸ್ವಾ|ಸ್ಟ್ಯಾನಿ ಗೋವಿಯಸ್, ಮುಖ್ಯೋಪಾಧ್ಯಾಯ ವಂ|ಸ್ವಾ| ದೀಪಕ್ ಲಿಯೋ ಡೇಸ ಎಲ್ಲಾ ಶಿಕ್ಷಕ-ಶಿಕ್ಷಕೇತರ ವೃಂದದದವರು ಹಾಗೂ ವಿದ್ಯಾರ್ಥಿಗಳು ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಮಾಡಿದರು.

ಶಾಲಾ ಸಂಚಾಲಕ ವಂ|ಸ್ವಾ|ಸ್ಟ್ಯಾನಿ ಗೋವಿಯಸ್ ರವರು ಮಕ್ಕಳನ್ನು ಉದ್ದೇಶಿಸಿ ಮಾತನಾಡಿ, ನಾವು ಸ್ವಚ್ಛತೆಗೆ ಪ್ರಾಮುಖ್ಯತೆಯನ್ನು ಕೊಡಬೇಕು, ನಮ್ಮ ಸುತ್ತಮುತ್ತಲಿನ ಪರಿಸರವನ್ನು ನಾವು ಸ್ವಚ್ಛವಾಗಿ ಇಡಬೇಕು ಎಂದು ಹೇಳಿ, ಮಕ್ಕಳಿಗೆ ಗಾಂಧಿ ಜಯಂತಿ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿ ಜಯಂತಿಯ ಶುಭಾಶಯಗಳು ಕೋರಿದರು.

ಎಲ್ಲಾ ಶಿಕ್ಷಕ-ಶಿಕ್ಷಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.ಈ ಕಾರ್ಯಕ್ರಮವನ್ನು ಸಹ ಶಿಕ್ಷಕಿಯಾದ ಹರಿಣಾಕ್ಷಿರವರು ನಿರೂಪಿಸಿ, ಕುಮಾರಿ ಪೂಜಶ್ರೀರವರು ಸ್ವಾಗತಿಸಿ, ಆಶಾಲತಾ ರವರು ಧನ್ಯವಾದವನ್ನು ಸಮರ್ಪಿಸಿದರು. ನಂತರ ಮಕ್ಕಳಿಗೆ ಸಿಹಿ ತಿಂಡಿಯನ್ನು ಹಂಚಲಾಯಿತು.

LEAVE A REPLY

Please enter your comment!
Please enter your name here