ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ದಿನಾಚರಣೆ

0

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ, ಎನ್ ಸಿ ಸಿ, ರೋವರ್ಸ್ ರೇಂಜರ್ಸ್, ಯುವ ರೆಡ್ ಕ್ರಾಸ್ ಘಟಕ ಹಾಗೂ ಕ್ರೀಡಾ ಸಂಘ ಇದರ ಜಂಟಿ ಆಶ್ರಯದಲ್ಲಿ ಸ್ವಚ್ಛತಾ ಹೀ ಸೇವಾ ಎಂಬ ಧ್ಯೇಯ ವಾಕ್ಯದೊಂದಿಗೆ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಇವರ ಜನ್ಮದಿನವನ್ನು ಆಚರಿಸಲಾಯಿತು.ಕಾರ್ಯಕ್ರಮದ ಮೊದಲಿಗೆ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಲಾಯಿತು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಅಲೆಕ್ಸ್ ಐವನ್ ಸಿಕ್ವೇರರವರು ಗಾಂಧೀಜಿಯ ಜೀವನವೇ ನಮಗೆಲ್ಲರಿಗೂ ಆದರ್ಶವಾಗಿದೆ, ಅವರ ನಡೆ ಮತ್ತು ನುಡಿ ಇಂದಿನ ಯುವ ಜನತೆಗೆ ಪ್ರೇರಣೆಯಾಗಿದೆ ಎಂದು ನುಡಿದರು.

ಸ್ವಚ್ಛತಾ ಹೀ ಸೇವಾ ಅಭಿಯಾನದ ಅಡಿಯಲ್ಲಿ ಕಾಲೇಜಿನಲ್ಲಿ ಆವರಣ ಸ್ವಚ್ಛತೆ, ಸ್ವಚ್ಛತಾ ಪ್ರತಿಜ್ಞೆ, ಬಿತ್ತಿ ಪತ್ರ ಸ್ಪರ್ಧೆ, ಸ್ವಚ್ಛತಾ ರೀಲ್ಸ್ ಸ್ಪರ್ಧೆ, ಸ್ವಚ್ಛತಾ ಜಾಥಾ, ಸ್ವಚ್ಛತಾ ಅರಿವು ಮೊದಲಾದ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಿ ವಿದ್ಯಾರ್ಥಿಗಳಲ್ಲಿ ಸ್ವಚ್ಛತೆಯ ಅರಿವನ್ನು ಮೂಡಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕ ಕೈಗೊಂಡ ಕಾರ್ಯಕ್ರಮವನ್ನು ಪ್ರಾಂಶುಪಾಲರು ಶ್ಲಾಘಿಸಿದರು.

ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸೇವಾ ಯೋಜನ ಘಟಕದ ಯೋಜನಾಧಿಕಾರಿಗಳಾದ ಪ್ರಶಾಂತ್ ಎಂ, ಜೀವ ವಿ ಸಿ, ಎನ್ ಸಿ ಸಿ ಅಧಿಕಾರಿ ಲೆಫ್ಟಿನೆಂಟ್ ಆಲ್ವಿನ್ ಕೆ ಜಿ, ರೋವರ್ಸ್ ರೇಂಜರ್ಸ್ ಅಧಿಕಾರಿ ಶ್ರೀನಾಥ್ ಬಿ ಎಸ್, ಯುವ ರೆಡ್ ಕ್ರಾಸ್ ಘಟಕದ ಸಹ ಅಧಿಕಾರಿ ವಿಯೋಲ ಸೆರಾವೊ, ಐಕ್ಯುಎಸಿ ನಿರ್ದೇಶಕ ರೋಬಿನ್ ಜೋಸೆಫ್ ಸೇರ ಹಾಗೂ ರಾಷ್ಟ್ರೀಯ ಸೇವಾ ಯೋಜನೆ, ಎನ್‌ಸಿಸಿ, ರೋವರ್ಸ್ ರೇಂಜರ್ಸ್, ಯುವ ರೆಡ್ ಕ್ರಾಸ್ ಘಟಕದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಸ್ವಯಂಸೇವಕಿ ಕುಮಾರಿ ಕಾವ್ಯ ನಿರೂಪಿಸಿದರು. ಸ್ವಯಂ ಸೇವಕಿ ಸಮಂತರವರು ಎಲ್ಲರನ್ನೂ ಸ್ವಾಗತಿಸಿ, ಕುಮಾರಿ ಮೇಘನಾ ವಂದಿಸಿದರು.

LEAVE A REPLY

Please enter your comment!
Please enter your name here