ಬೆಳಾಲು: 1867ನೇ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭ

0

ಬೆಳಾಲು : ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಇದರ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಬೆಳ್ತಂಗಡಿ, ಜನಜಾಗೃತಿ ವೇದಿಕೆ ಬೆಳ್ತಂಗಡಿ ತಾಲೂಕು, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನ ಮುಕ್ತಿ ಮತ್ತು ಸಂಶೋಧನ ಕೇಂದ್ರ ಲಾಯಿಲ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು ಇದರ ಮಾರ್ಗದರ್ಶನದಲ್ಲಿ ಬೆಳಾಲು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅರಿಕೋಡಿ, ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ, ರೋಟರಿ ಕ್ಲಬ್ ಬೆಳ್ತಂಗಡಿ, ಪ್ರಗತಿ ಬಂಧು ಸ್ವ ಸಹಾಯ ಸಂಘಗಳ ಒಕ್ಕೂಟ ಉಜಿರೆ, ನವಜೀವನ ಸಮಿತಿಗಳು ಇವರ ಸಹಕಾರದೊಂದಿಗೆ ಬೆಳಾಲು ನವಜೀವನ ಸಮಿತಿ ಸದಸ್ಯರ 25ನೇ ವರ್ಷದ ಸಂಭ್ರಮಾಚರಣೆ ಪ್ರಯುಕ್ತ ಬೆಳಾಲು ಶ್ರೀ ಧ. ಮ. ಪ್ರೌಢ ಶಾಲೆಯಲ್ಲಿ ಅ.4ರಿಂದ ಒಂದು ವಾರ ನಡೆದ 1867ನೇ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭ ಅ.11ರಂದು ನಡೆಯಿತು.

ಅಧ್ಯಕ್ಷತೆಯನ್ನು ಮದ್ಯವರ್ಜನ ಶಿಬಿರದ ವ್ಯವಸ್ಥಾಪಾನ ಸಮಿತಿಯ ಅಧ್ಯಕ್ಷ ನೋಟರಿ ವಕೀಲ ಶ್ರೀನಿವಾಸ ಗೌಡ ವಹಿಸಿದ್ದರು. ವಿಧಾನ ಪರಿಷತ್ ಸದಸ್ಯ ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷ ಪ್ರತಾಪಸಿಂಹ ನಾಯಕ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಜಿಲ್ಲಾಧ್ಯಕ್ಷ ಪದ್ಮನಾಭ ಶೆಟ್ಟಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿ. ಪಾಯಸ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕ ದುಗ್ಗೆ ಗೌಡ, ಪ್ರಗತಿ ಬಂಧು ತಾಲೂಕು ಒಕ್ಕೂಟದ ಅಧ್ಯಕ್ಷ ಸೀತಾರಾಮ, ಧರ್ಮಸ್ಥಳ ಭಜನಾ ಪರಿಷತ್ ಅಧ್ಯಕ್ಷ ಚಂದ್ರಶೇಖರ್ ಸಾಲಿಯಾನ್, ಶೌರ್ಯ ವಿಪತ್ತು ನಿರ್ವಹಣಾ ಸಮಿತಿ ಕ್ಯಾಪ್ಟನ್ ಸಂತೋಷ್, ನವಜೀವನ ಸಮಿತಿ ಗ್ರಾಮ ಸಮಿತಿ ಅಧ್ಯಕ್ಷ ಸೂರಪ್ಪ ಗೌಡ, ಶಿಬಿರ ವ್ಯವಸ್ಥಾಪನಾ ಸಮಿತಿಯ ಗೌರವಾಧ್ಯಕ್ಷ, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಎನ್. ಜತ್ತನ್ನ ಗೌಡ, ಯೋಜನೆಯ ನಿವೃತ್ತ ಪ್ರಾದೇಶಿಕ ನಿರ್ದೇಶಕ ಸೀತಾರಾಮ ಶೆಟ್ಟಿ ಕೆಂಬರ್ಜೆ, ಜನಜಾಗೃತಿ ವೇದಿಕೆಯ ನಿಕಟ ಪೂರ್ವ ಅಧ್ಯಕ್ಷೆ ಶಾರದಾ ರೈ, ಮಾಜಿ ಅಧ್ಯಕ್ಷ ಪಿ. ತಿಮ್ಮಪ್ಪ ಗೌಡ ಬೆಳಾಲು, ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ ಗೌಡ, ಬೆಳಾಲು ಪ್ರೌಢ ಶಾಲಾ ಮುಖ್ಯ ಶಿಕ್ಷಕ ಜಯರಾಮ ಮಯ್ಯ, ನಿವೃತ್ತ ಶಿಕ್ಷಕ ರಾಮಕೃಷ್ಣ ಭಟ್, ಉಜಿರೆ ರತ್ನಮಾನಸ ನಿಲಯ ಮೇಲ್ವಿಚಾರಕ ಯತೀಶ್ ಬಳಂಜ, ಯೋಜನೆಯ ತಾಲೂಕು ಯೋಜನಾಧಿಕಾರಿ ಸುರೇಂದ್ರ, ಜನಜಾಗೃತಿ ವೇದಿಕೆಯ ಪ್ರಾದೇಶಿಕ ಕಚೇರಿ ಯೋಜನಾಧಿಕಾರಿ ಗಣೇಶ್ ಆಚಾರ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಜ್ಞಾನವಿಕಾಸ ಕೇಂದ್ರದ ಸಮನ್ವಯಾಧಿಕಾರಿ ಮಧುರ ಸ್ವಾಗತಿಸಿದರು. ಕೃಷಿ ನಿರ್ದೇಶಕ ರಾಮ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಚಿತ್ತರಂಜನ್ ವಂದಿಸಿದರು. ಉಜಿರೆ ವಲಯ ಮೇಲ್ವಿಚಾರಕಿ ವನಿತಾ, ವಲಯದ ಸೇವಾ ಪ್ರತಿನಿಧಿಗಳು, ಜನಜಾಗೃತಿ ವೇದಿಕೆ, ನವಜೀವನ ಸಮಿತಿಯ ಪದಾಧಿಕಾರಿಗಳು, ಒಕ್ಕೂಟದ ಪದಾಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಹಾಜರಿದ್ದರು.

ಶಿಬಿರಾರ್ಥಿ ಶಿವಣ್ಣ ಕಲ್ಮಂಜ ಅನಿಸಿಕೆ ವ್ಯಕ್ತ ಪಡಿಸಿದರು. ಕಳೆದ 25 ವರ್ಷದಿಂದ ಮದ್ಯಪಾನ ಬಿಟ್ಟು ನೆಮ್ಮದಿ ಜೀವನ ನಡೆಸುತ್ತಿರುವ ಬೆಳಾಲು ನವಜೀವನ ಸಮಿತಿ ಸದಸ್ಯರನ್ನು, ಮದ್ಯವರ್ಜನ ಶಿಬಿರಕ್ಕೆ ಸಹಕಾರ ನೀಡಿದ ಶೌರ್ಯ ತಂಡದ ಸದಸ್ಯರನ್ನು, ಸ್ವಯಂ ಸೇವಕರನ್ನು, ಶಿಬಿರಾಧಿಕಾರಿ ದೇವಿಪ್ರಸಾದ್, ಅರೋಗ್ಯ ಸಹಾಯಕಿ ಪ್ರೆಸಿಲ್ಲಾ, ಯೋಜನಾಧಿಕಾರಿ ಗಣೇಶ್ ಆಚಾರ್ಯ ಇವರನ್ನು ಗೌರವಿಸಲಾಯಿತು.

p>

LEAVE A REPLY

Please enter your comment!
Please enter your name here