ಮುಂಡೂರು: ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ವಿಶೇಷ ಪೂಜೆ- ಭಜನೆ

0

ಮುಂಡೂರು : ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮುಂಡೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, ಶಾರದಾಂಬ ಭಜನಾ ಮಂಡಳಿ, ಶಾರದಾಂಬ ಯುವಕ ಮಂಡಲ ಇವುಗಳ ಆಶ್ರಯದಲ್ಲಿ ಅ.3ರಿಂದ 11ರವರೆಗೆ ನವರಾತ್ರಿ ಉತ್ಸವ ಹಾಗೂ ಭಜನಾ ಕಾರ್ಯಕ್ರಮ ನಡೆಯಿತು.

9 ದಿನಗಳಲ್ಲಿ ನಡೆದ ಭಜನಾ ಕಾರ್ಯಕ್ರಮವನ್ನು ದೇವಸ್ಥಾನದ ಪ್ರಧಾನ ಅರ್ಚಕ ಅರವಿಂದ ಭಟ್ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು. ಅ.5ರಂದು ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿ ಸದಸ್ಯರು ಭಜನಾ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಭಜನಾ ಮಂಡಳಿ, ಯುವಕ ಮಂಡಲದ ಪದಾಧಿಕಾರಿಗಳು, ಊರವರು, ಭಕ್ತಾಭಿಮಾನಿಗಳು ಭಾಗವಹಿಸಿ ಭಜನಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

LEAVE A REPLY

Please enter your comment!
Please enter your name here