ಉಜಿರೆ: ಬೆಳಾಲು ಅಂತೋಡಿಯಲ್ಲಿ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನೇತೃತ್ವದಲ್ಲಿ ಯುವ ಸಿರಿ- 500ಕ್ಕೂ ಮಿಕ್ಕಿ ವಿದ್ಯಾರ್ಥಿಗಳಿಂದ ನೇಜಿ ನಾಟಿ ಕಾರ್ಯಕ್ರಮ

0

ಉಜಿರೆ : ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಇದರ ನೇತೃತ್ವದಲ್ಲಿ ಶ್ರೀ ಧ. ಮ. ಕಾಲೇಜು ರಾಷ್ಟ್ರೀಯ ಯೋಜನಾ ಘಟಕಗಳು, ಉಜಿರೆ ಶ್ರೀ ಧ. ಮ. ಸ್ಪೋರ್ಟ್ಸ್ ಕ್ಲಬ್, ಬೆಳ್ತಂಗಡಿ ರೋಟರಿ ಕ್ಲಬ್, ತಾಲೂಕು ಪತ್ರಕರ್ತರ ಸಂಘ, ಅನಂತೋಡಿ ಶ್ರೀ ಅನಂತಪದ್ಮನಾಭಾ ದೇವಸ್ಥಾನದ ಸಹಯೋಗದಲ್ಲಿ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭಾ ದೇವಸ್ಥಾನದ ಸಮೀಪದ ಗದ್ದೆಯಲ್ಲಿ ಯುವ ಸಿರಿ, ರೈತ ಭಾರತದ ಐಸಿರಿ ಸುಮಾರು 500ಕ್ಕೂ ಮಿಕ್ಕಿ ವಿದ್ಯಾರ್ಥಿಗಳಿಂದ ಏಕಕಾಲದಲ್ಲಿ ನೇಜಿನಾಟಿ ಕಾರ್ಯಕ್ರಮ ಅ.20ರಂದು ನಡೆಯಿತು.

ಕಾರ್ಯಕ್ರಮವನ್ನು ಸೋನಿಯಾ ಯಶೋವರ್ಮ ಉದ್ಘಾಟಿಸಿದರು. ಉಜಿರೆ ದೇವಸ್ಥಾನದ ಅನುವಂಶಿಕ ಆಡಳಿತ ಮೋಕ್ತೆಸರ ಶರತ್ ಕೃಷ್ಣ ಪಡುವೆಟ್ನಾಯ, ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಉಜಿರೆ ಶ್ರೀ ಧ. ಮ. ಕಾಲೇಜು ಪ್ರಾಂಶುಪಾಲ ಡಾ. ಬಿ. ಎ.ಕುಮಾರ ಹೆಗ್ಡೆ, ಧರ್ಮಸ್ಥಳ ಕೃಷಿ ವಿಭಾಗದ ಮುಖ್ಯಸ್ಥ ಬಿ. ಬಾಲಕೃಷ್ಣ ಪೂಜಾರಿ, ತಾಲೂಕು ಪತ್ರಕರ್ತ ಸಂಘದ ಅಧ್ಯಕ್ಷ ಚೈತ್ರೇಶ್ ಇಳಂತಿಲ, ರೋಟರಿ ಕ್ಲಬ್ ಮಾಜಿ ಅಧ್ಯಕ್ಷ ಬಿ. ಕೆ. ಧನಂಜಯ ರಾವ್, ಅನಂತೋಡಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಶ್ರೀನಿವಾಸ ಗೌಡ ಬೆಳಾಲು, ಪ್ರಧಾನ ಕಾರ್ಯದರ್ಶಿ ದುರ್ಗಾಪ್ರಸಾದ್, ಉಪಾಧ್ಯಕ್ಷೆ ಮಮತಾ ದಿನೇಶ್ ಪೂಜಾರಿ, ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಗೌಡ, ಉಜಿರೆ ಶ್ರೀ ಧ. ಮ. ಇಂಜಿನಿಯರಿಂಗ್ ಕಾಲೇಜು ಉಪನ್ಯಾಸಕ ರವೀಶ್ ಪಡುಮಲೆ, ಅನಂತೋಡಿ ಮಹಿಳಾ ಸಮಿತಿಯ ಅಧ್ಯಕ್ಷೆ ಹೇಮಲತಾ ಶ್ರೀನಿವಾಸ ಗೌಡ, ಶ್ರೀ ಧ. ಮ. ಕಾಲೇಜು ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ಡಾ. ಮಹೇಶ್ ಕುಮಾರ್ ಶೆಟ್ಟಿ, ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ರಾಜೇಶ್ ಪೈ, ಎಸ್ ಡಿ ಎಂ ಸ್ಪೋರ್ಟ್ಸ್ ಕ್ಲಬ್ ಕಾರ್ಯದರ್ಶಿ ರಮೇಶ್, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಕೃಷಿ ಸಾಧಕ ಬಿ. ಕೆ. ದೇವ ರಾವ್ ಇವರನ್ನು ಗೌರವಿಸಲಾಯಿತು. ರೋಟರಿ ಕ್ಲಬ್ ಅಧ್ಯಕ್ಷ ಪೂರನ್ ವರ್ಮ ಸ್ವಾಗತಿಸಿದರು. ಬದುಕು ಕಟ್ಟೋಣ ತಂಡದ ಸಂಚಾಲಕ ಮೋಹನ್ ಕುಮಾರ್ ಪ್ರಸ್ತಾಪಿಸಿದರು. ತಿಮ್ಮಯ್ಯ ನಾಯ್ಕ ನಿರೂಪಿಸಿದರು.

p>

LEAVE A REPLY

Please enter your comment!
Please enter your name here