ಉಜಿರೆ: ಉಜಿರೆಯ ಎಸ್.ಡಿ.ಎಂ. ನ್ಯಾಚುರಪತಿ ಕಾಲೇಜಿನಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಕರ್ನಾಟಕ ಬೆಂಗಳೂರು ಸಹಯೋಗದಿಂದ ಪುರುಷರ ಹಾಗೂ ಮಹಿಳೆಯರ ವಿಭಾಗದ ಟೇಬಲ್ ಟೆನಿಸ್ ಪಂದ್ಯಾಟವು ನಡೆಯಿತು.
ಪಂದ್ಯಾಟದ ಉದ್ಘಾಟನೆಯನ್ನು ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಅಬ್ಸರ್ವರ್ ಡಾ. ರಮೇಶ್ ನಾಯಕ್ ನೆರವೇರಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಡಾ. ಪ್ರಶಾಂತ್ ಶೆಟ್ಟಿ ವಹಿಸಿದ್ದರು, ಉಪ ಪ್ರಾಂಶುಪಾಲೆ ಡಾ. ಸುಜಾತ ಸ್ವಾಗತಿಸಿ, ದೈಹಿಕ ಶಿಕ್ಷಣ ನಿರ್ದೇಶಕ ಧರ್ಮೇಂದ್ರ ಕುಮಾರ್ ವಂದಿಸಿದರು. ಕಾಲೇಜಿನ ವಿದ್ಯಾರ್ಥಿನಿ ಸಂಸ್ಕೃತಿ ಜೈನ್ ನಿರೂಪಿಸಿದರು.
ಫಲಿತಾಂಶ: ಪುರುಷರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಬೆಂಗಳೂರು ಅಂಬೇಡ್ಕರ್ ಡೆಂಟಲ್ ಕಾಲೇಜ್, ದ್ವಿತೀಯ ಸ್ಥಾನವನ್ನು ಬೆಂಗಳೂರು ಮೆಡಿಕಲ್ ಕಾಲೇಜ್ ಹಾಗೂ ಮಹಿಳಾ ವಿಭಾಗದ ಪ್ರಥಮ ಸ್ಥಾನವನ್ನು ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ ತಂಡ ಹಾಗೂ ದ್ವಿತೀಯ ಸ್ಥಾನವನ್ನು ಬೆಂಗಳೂರು ಮೆಡಿಕಲ್ ಕಾಲೇಜ್ ತಂಡವು ಪಡೆಯಿತು, ಹಾಗೂ ದಕ್ಷಿಣ ಭಾರತ ಮಟ್ಟದ ಟೇಬಲ್ ಟೆನ್ನಿಸ್ ಪುರುಷರ ಮತ್ತು ಮಹಿಳಾ ವಿಭಾಗದ ತಂಡದ ಪ್ರಕ್ರಿಯೆಯು ನಡೆಯಿತು.