ಬೆಳ್ತಂಗಡಿ: ಕಸ್ತೂರಿ ರಂಗನ್ ವರದಿಯ ವಿರುದ್ಧ ಬೃಹತ್ ಪ್ರತಿಭಟನಾ ಸಭೆ ಬೆಳ್ತಂಗಡಿ ತಾಲೂಕಿನಲ್ಲಿ ನಡೆಯಲಿದೆ. ಇದರ ಪೂರ್ವ ಭಾವಿ ಸಭೆಯು ಉಜಿರೆ ಶಾರದಾ ಮಂಟಪದಲ್ಲಿ ಅ. 23ರಂದು ಬುಧವಾರ ಬೆಳಿಗ್ಗೆ 10.30ಕ್ಕೆ ನಡೆಯಲಿದೆ. ಬೆಳ್ತಂಗಡಿ ತಾಲೂಕಿನ ಕಸ್ತೂರಿ ರಂಗನ್ ವರದಿ ಬಾಧಿತ ಗ್ರಾಮಗಳಿಂದ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮುಂದೆ ತಾಲೂಕು ಮಟ್ಟದ ಹೋರಾಟ ಗ್ರಾಮ ಮಟ್ಟದ ಹೊರಟ ಬಗ್ಗೆ ತಮ್ಮ ಸಲಹೆ ಸೂಚನೆಗಳನ್ನು ನೀಡಿ ಈ ಹೋರಾಟಕ್ಕೆ ಬೆಂಬಲ ನೀಡಬೇಕೆಂದು ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
p>