ನ.4: ಭಜಕ ಸಹೋದರಿಯರ ಕುರಿತು ಕೀಳು ಮಟ್ಟದ ಹೇಳಿಕೆ ನೀಡಿರುವವರ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ

0

ಬೆಳ್ತಂಗಡಿ: ಕಳೆದ ಕೆಲವು ದಿನಗಳ ಹಿಂದೆ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಕಾಣಿಯೂರು ಭಜಕ ಸಹೋದರಿಯರ ಕುರಿತು ಕೀಳು ಮಟ್ಟದ ಅವಹೇಳನಕಾರಿಯಾದ ಮಾತುಗಳನ್ನು ನೀಡಿರುವುದನ್ನು ಕಟು ಶಬ್ದಗಳಿಂದ ಖಂಡನೆಯನ್ನು ವ್ಯಕ್ತಪಡಿಸುತ್ತ, ಭಜನೆಯು ಅನಾಧಿಕಾಲದಿಂದಲೂ ಆಚರಿಸಿಕೊಂಡು ಬರುತ್ತಿರುವ ಭಕ್ತಿಯ ಆಚರಣೆ. ಇಂದು ಬೆಳ್ತಂಗಡಿ ತಾಲೂಕಿನಲ್ಲಿ ಹಲವಾರು ಭಜನಾ ಮಂಡಳಿಗಳು ಇದೆ. ಹಲವಾರು ಭಜಕರು ತಮ್ಮನ್ನು ತಾವು ಭಕ್ತಿ ಸೇವೆಯಲ್ಲಿ ತೊಡಗಿಸಿ ಕೊಂಡಿದ್ದಾರೆ. ಇಲ್ಲಿ ಯಾವುದೇ ರೀತಿಯ ಮೇಲ್ವರ್ಗ ಕೆಳವರ್ಗ ಎಂಬ ಭೇದ ಭಾವನೆಗಳು ಇಲ್ಲ. ಭಜನೆಯ ಮೂಲಕ ಸಮಾಜದಲ್ಲಿ ಸಮಾನತೆಯ ಸಂದೇಶವನ್ನು ಸಾರುತ್ತಾ ಉತ್ತಮವಾದ ಹಾದಿಯಲ್ಲಿ ಮುನ್ನಡೆಯುತ್ತಿರುವ ಭಜಕ ಸಹೋದರಿಯರ ಬಗ್ಗೆ ಮತ್ತು ಭಜನೆಯ ಕುರಿತು ಕೀಳು ಮಟ್ಟದ ಹೇಳಿಕೆಯನ್ನು ನೀಡುತ್ತಿರುವುದು ನಮ್ಮೆಲ್ಲರ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದೆ. ಇಂತಹ ಹೇಳಿಕೆಗಳು ಸಮಾಜದಲ್ಲಿ ಅಶಾಂತಿಯ ವಾತಾವರಣವನ್ನು ನಿರ್ಮಿಸುವಂತಿದೆ.

ಇಂತಹ ಹೇಳಿಕೆಗಳನ್ನು ನೀಡುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಒತ್ತಾಯಿಸಿ ಬೆಳ್ತಂಗಡಿ ಭಜನಾ ಪರಿಷತ್ ಮತ್ತು ಬೆಳ್ತಂಗಡಿ ಕುಣಿತ ಭಜನಾ ತರಬೇತಿದಾರರ ಸಂಘ ನೇತೃತ್ವದಲ್ಲಿ ಎಲ್ಲಾ ಹಿಂದೂಪರ ಸಂಘಟನೆಗಳ ಹಾಗೂ ತಾಲೂಕಿನ ಎಲ್ಲಾ ಭಜನಾ ಮಂಡಳಿಗಳ ಸಹಕಾರದೊಂದಿಗೆ ತಾಲೂಕಿನ ಎಲ್ಲಾ ಭಜಕರು ನ.4ರಂದು ಬೆಳಿಗ್ಗೆ 9.30ಕ್ಕೆ ಬೆಳ್ತಂಗಡಿ ಸಂತೆಕಟ್ಟೆ ಬಳಿಯ ಅಯ್ಯಪ್ಪ ದೇವಸ್ಥಾನದಿಂದ ಭಜನಾ ಮೆರವಣಿಗೆಯ ಮೂಲಕ ಬಂದು ಬೆಳ್ತಂಗಡಿ ಮಿನಿ ವಿಧಾನಸೌದದ ಬಳಿಯಲ್ಲಿ ಸಮಾವೇಶಗೊಂಡು ತಹಶೀಲ್ದಾರರ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಿದ್ದೇವೆ ಎಂದು ಭಜನಾ ಪರಿಷತ್ ರಾಜ್ಯ ಅಧ್ಯಕ್ಷ ಚಂದ್ರಶೇಖರ್ ಸಾಲಿಯಾನ್ ಹೇಳಿದರು.

ಅವರು ಅ.29ರಂದು ಬೆಳ್ತಂಗಡಿಯಲ್ಲಿ ಕರೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದರು. ಭಜಕರ ಸಮಾವೇಶದಲ್ಲಿ ವಕೀಲರ ಬಿ. ಕೆ. ಧನಂಜಯ ರಾವ್, ಸುಬ್ರಹ್ಮಣ್ಯ ಕುಮಾರ್ ಆಗರ್ತ, ಕುಣಿತ ಭಜನಾ ತರಬೇತಿದಾರರ ಸಂಘದ ಅಧ್ಯಕ್ಷ ಸಂದೇಶ ಸುವರ್ಣ, ತಾಲೂಕಿನ ಎಲ್ಲಾ ಭಜನಾ ಮಂಡಳಿಗಳ ಭಜಕರು ಉಪಸ್ಥಿತರಿರುತ್ತಾರೆ ಎಂದರು.

ಪತ್ರಿಕಾ ಗೋಷ್ಠಿಯಲ್ಲಿ ವಿಶ್ವ ಹಿಂದೂ ಪರಿಷತ್ ಪುತ್ತೂರು ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ಭಜನಾ ಪರಿಷತ್ ತಾಲೂಕು ಅಧ್ಯಕ್ಷ ವೆಂಕಟೇಶ್ವರ ಭಟ್ ಕಜೆ, ಕುಣಿತ ಭಜನಾ ತರಬೇತಿದಾರರ ಸಂಘದ ಕಾರ್ಯದರ್ಶಿ ಹರೀಶ್ ನೆರಿಯ, ಭಜನಾ ಪರಿಷತ್ ಸಂಘಟನಾ ಕಾರ್ಯದರ್ಶಿ ನಾಗೇಶ್ ನೆರಿಯ, ಭಜನಾ ಪರಿಷತ್ ಸಂಯೋಜಕಿ ಬೇಬಿ ಉಮೇಶ ಪೂಜಾರಿ, ಭಜನಾ ಪರಿಷತ್ ಸಂಯೋಜಕ ಸೋಮನಾಥ್, ಸದಸ್ಯೆ ಗೀತಾ ವಿ. ನಾಯ್ಕ ಉಪಸ್ಥಿತರಿದ್ದರು.

p>

LEAVE A REPLY

Please enter your comment!
Please enter your name here