ಬೆಳ್ತಂಗಡಿ: ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ಬೆಳ್ತಂಗಡಿ ತಾಲೂಕು ಬಿಜೆಪಿ ಯುವ ಮೋರ್ಚಾ ವತಿಯಿಂದ ಅಕ್ಟೋಬರ್ 31 ನೇ ಗುರುವಾರದಂದು 5ನೇ ವರ್ಷದ ದೀಪಾವಳಿ ದೋಸೆಹಬ್ಬ-2024ಕ್ಕೆ ಬೆಳ್ತಂಗಡಿ ಬಸ್ ನಿಲ್ದಾಣದ ಬಳಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ದೀಪ ಪ್ರಜ್ವಲಿಸಿ ಕಾರ್ಯಕ್ರಮ ಉದ್ಘಾಟಿಸಿದರು. ರಾಜ್ಯ ಯುವಮೋರ್ಚದ ಪ್ರಧಾನ ಕಾರ್ಯದರ್ಶಿ ಶಾಸಕ ಹರೀಶ್ ಪೂಂಜ, ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್, ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಯುವ ಮೋರ್ಚಾದ ಅಧ್ಯಕ್ಷ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿ ವಿನೀತ್ ಕೋಟ್ಯಾನ್, ಪ್ರಮುಖರಾದ ಉಮೇಶ್ ಕುಲಾಲ್, ಜಯಪ್ರಕಾಶ್ ಕಡಮ್ಮಾಜೆ, ಪ್ರಮೋದ್ ಗೌಡ ಡಿಡುಪೆ , ವಿದ್ಯಾ ಶ್ರೀನಿವಾಸ್ ಗೌಡ ಉಪಸ್ಥಿತರಿದ್ದರು.
p>