p>
ಕೊಕ್ಕಡ: ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಾಲಯದ ವತಿಯಿಂದ ನಡೆಸುತ್ತಿರುವ ಗೋಶಾಲೆಯಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗೋಪೂಜೆಯನ್ನು ಆಚರಿಸಲಾಯಿತು. ದೇವಸ್ಥಾನದ ಅರ್ಚಕರಾದ ಗುರುರಾಜ್ ಉಪ್ಪರ್ನ ಪೂಜಾ ವಿಧಿ ವಿಧಾನಗಳ ಮೂಲಕ ಗೋಪೂಜೆಯನ್ನು ನೆರವೇರಿಸಿದರು.
ಗೋಶಾಲೆಯಲ್ಲಿ ಸುಮಾರು 230 ಗೋವುಗಳು ಇದ್ದು, ಅವುಗಳಿಗೆ ವಿಶೇಷವಾಗಿ ದೋಸೆ, ಬೆಲ್ಲ, ಅವಲಕ್ಕಿ, ಪಂಚ ಕಜ್ಜಾಯಗಳನ್ನು ನೀಡಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಸಿಬ್ಬಂದಿಗಳು, ಗೋಶಾಲೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
p>