ಬೆಳ್ತಂಗಡಿ ಭಜಕರ ಬೃಹತ್ ಸಮಾವೇಶ

0

ಬೆಳ್ತಂಗಡಿ: ಬೆಳ್ತಂಗಡಿ ಭಜನಾ ಪರಿಷತ್ ಮತ್ತು ಕಣಿತ ಭಜನಾ ತರಬೇತಿದಾರರ ಸಂಘ ಇವುಗಳ ನೇತೃತ್ವದಲ್ಲಿ ಹಾಗೂ ತಾಲೂಕಿನ ಎಲ್ಲಾ ಹಿಂದೂಪರ ಸಂಘಟನೆಗಳ ಮತ್ತು ತಾಲೂಕಿನ ಎಲ್ಲಾ ಭಜನಾ ಮಂಡಳಿಗಳ ಸಹಕಾರದೊಂದಿಗೆ ಭಜಕ ಸಹೋದರಿಯರ ಮತ್ತು ಹಿಂದೂ ಸಂಘಟನೆಗಳ ಬಗ್ಗೆ ಅತ್ಯಂತ ಕೀಳು ಮಟ್ಟದ ಹೇಳಿಕೆಗಳನ್ನು ನೀಡುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕಾಗಿ ಒತ್ತಾಯಿಸಿ ಭಜಕರ ಬೃಹತ್ ಸಮಾವೇಶ ನ.4ರಂದು ಬೆಳ್ತಂಗಡಿ ತಾಲೂಕು ಆಡಳಿತ ಸೌಧದ ಆವರಣದಲ್ಲಿ ನಡೆಯಿತು.

ವಕೀಲ, ಕಳೆಂಜ ಸ್ವಾಮಿ ವಿವೇಕಾನಂದ ಸೇವಾಶ್ರಮ ಟ್ರಸ್ಟ್ ನ ಕಾರ್ಯದರ್ಶಿ ಸುಬ್ರಹ್ಮಣ್ಯ ಅಗರ್ತ, ವಕೀಲ ಬಿ.ಕೆ. ಧನಂಜಯ ಕುಮಾರ್, ರಾಷ್ಟ್ರ ಸೇವಕ ಸಮಿತಿಯ ಗಿರಿಜಾ ಭಟ್, ಭಜನಾ ಪರಿಷತ್ ರಾಜ್ಯಧ್ಯಾಕ್ಷ ಚಂದ್ರಶೇಖರ್ ಪಿ. ಸಾಲ್ಯಾನ್, ವಿಶ್ವ ಹಿಂದೂ ಪರಿಷತ್ ಪುತ್ತೂರು ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ಬೆಳ್ತಂಗಡಿ ಭಜನಾ ಪರಿಷತ್ ಅಧ್ಯಕ್ಷ ವೆಂಕಟೇಶ್ವರ ಭಟ್ ಕಜೆ, ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜ, ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್, ನ.ಪಂ ಅಧ್ಯಕ್ಷ ಜಯಾನಂದ ಗೌಡ, ಪ್ರಮುಖರಾದ ಭಾಸ್ಕರ್ ಧರ್ಮಸ್ಥಳ, ಸೀತಾರಾಮ ಬೆಳಾಲ್, ಕೊರಗಪ್ಪ ನಾಯ್ಕ, ಜಯಂತ್ ಗೌಡ, ಮಂಜುನಾಥ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ಭಜನಾ ಪರಿಷತ್ ಉಪಾಧ್ಯಕ್ಷ ಜಯಪ್ರಕಾಶ್ ಕಡಮ್ಮಾಜೆ ಸ್ವಾಗತಿಸಿದರು. ಭಜನಾ ತರಬೇತಿ ಶಿಕ್ಷಕ ಹರೀಶ್ ನೆರಿಯ ಕಾರ್ಯ ನಿರೂಪಿಸಿದರು. ಸಮಾವೇಶಕ್ಕೆ ಮೊದಲು ಬೆಳ್ತಂಗಡಿ ಅಯ್ಯಪ್ಪ ಮಂದಿರದ ಬಳಿಯಿಂದ ತಾಲೂಕು ಕಚೇರಿ ತನಕ ಪ್ರತಿಭಟನಾ ಮೆರವಣಿಗೆ ನಡೆಯಿತು. ಈ ವೇಳೆ ನೂರಾರು ಭಜಕರು ಸಮಾವೇಶದಲ್ಲಿ ಪಾಲ್ಗೊಂಡರು.

p>

LEAVE A REPLY

Please enter your comment!
Please enter your name here