ಶಿಬಾಜೆ: ಮಲೆನಾಡು ಜನ ಹಿತ ರಕ್ಷಣಾ ವೇದಿಕೆಯ ವತಿಯಿಂದ ಕಸ್ತೂರಿ ರಂಗನ್ ವರದಿ ವಿರೋಧಿಸಿ ಪ್ರತಿಭಟನೆ

0

ಶಿಬಾಜೆ: ಮಲೆನಾಡು ಜನ ಹಿತ ರಕ್ಷಣಾ ವೇದಿಕೆಯ ವತಿಯಿಂದ ಕಸ್ತೂರಿ ರಂಗನ್ ವರದಿ ವಿರೋಧಿಸಿ ಶಿಬಾಜೆ ಗ್ರಾ.ಪಂ ವಠಾರದಲ್ಲಿ ಪ್ರತಿಭಟನೆ ನಡೆಯಿತು. ನಂತರ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯರಾಜ್ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.

ಸರಕಾರ ಕಂದಾಯ ಮತ್ತು ಅರಣ್ಯ ಇಲಾಖೆಯಿಂದ ಜಂಟಿ ಸರ್ವೆ ಮಾಡಿ ಪಶ್ಚಿಮ ಘಟ್ಟ ಮತ್ತು ಜನವಸತಿ ಪ್ರದೇಶಕ್ಕೆ ಗಡಿಗುರುತು ಆಗಬೇಕು. ಪಶ್ಚಿಮ ಘಟ್ಟಕ್ಕೆ ಬರುವ ಅರಣ್ಯ ಸಂರಕ್ಷಣಾ ಕಾಯ್ದೆ ಕೃಷಿ ಭೂಮಿ ಜನವಸತಿ ಪ್ರದೇಶ ಮತ್ತು ಮೂಲಭೂತ ಸೌಕರ್ಯಕ್ಕೆ ಅನ್ವಯಿಸಬಾರದು ಎಂದು ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಶಿರಾಡಿ ಆಗ್ರಹಿಸಿದರು.

ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷೆ ರತ್ನ, ಉಪಾಧ್ಯಕ್ಷ ದಿನಕರ್ ಕುರುಪ್, ನಿಕಟಪೂರ್ವ ಉಪಾಧ್ಯಕ್ಷ ವಿನಯ ಚಂದ್ರ ಟಿ., ಮಾಜಿ ಉಪಾಧ್ಯಕ್ಷ ಪರಮೇಶ್ವರ ಪೂಜಾರಿ, ಶಿಶಿಲ ಪಂಚಾಯತ್ ನಿಕಟಪೂರ್ವಾಧ್ಯಕ್ಷ ಸಂದೀಪ್ ಅಮ್ಮುಡಂಗೆ ಮಲೆನಾಡು ಹಿತರಕ್ಷಣಾ ವೇದಿಕೆಯ ಜನ ಸಂಪರ್ಕ ಸಮಿತಿ ಸದಸ್ಯ ಕರುಣಾಕರ ಶಿಶಿಲ ಹಾಗೂ ಸಮಿತಿ ಸದಸ್ಯರಾದ ನವೀನ್ ರೆಖ್ಯ, ಮಹೇಶ್ ಶೆಟ್ಟಿಗಾರ್, ರಮೇಶ್ ಕುರುoಜ, ಗ್ರಾಮಸ್ಥರು ಉಪಸ್ಥಿತರಿದ್ದರು. ಜಯರಾಮ್ ಶಿಬಾಜೆ ಸ್ವಾಗತಿಸಿ, ಧನ್ಯವಾದವಿತ್ತರು.

p>

LEAVE A REPLY

Please enter your comment!
Please enter your name here