ಅರಸಿನಮಕ್ಕಿ: ಮಲೆನಾಡು ಜನ ಹಿತ ರಕ್ಷಣಾ ವೇದಿಕೆಯ ವತಿಯಿಂದ ಕಸ್ತೂರಿ ರಂಗನ್ ವರದಿ ವಿರೋಧಿಸಿ ಪ್ರತಿಭಟನೆ

0

ಅರಸಿನಮಕ್ಕಿ: ಮಲೆನಾಡು ಜನ ಹಿತ ರಕ್ಷಣಾ ವೇದಿಕೆಯ ವತಿಯಿಂದ ಕಸ್ತೂರಿ ರಂಗನ್ ವರದಿ ವಿರೋಧಿಸಿ ಅರಸಿನಮಕ್ಕಿ ಗ್ರಾ. ಪಂ. ವಠಾರದಲ್ಲಿ ನ.7ರಂದು ಪ್ರತಿಭಟನೆ ನಡೆಯಿತು. ನಂತರ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯರಾಜ್ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.

ಸರಕಾರ ಕಂದಾಯ ಮತ್ತು ಅರಣ್ಯ ಇಲಾಖೆಯಿಂದ ಜಂಟಿ ಸರ್ವೆ ಮಾಡಿ ಪಶ್ಚಿಮ ಘಟ್ಟ ಮತ್ತು ಜನವಸತಿ ಪ್ರದೇಶಕ್ಕೆ ಗಡಿ ಗುರುತು ಆಗಬೇಕು. ಪಶ್ಚಿಮ ಘಟ್ಟಕ್ಕೆ ಬರುವ ಅರಣ್ಯ ಸಂರಕ್ಷಣಾ ಕಾಯ್ದೆ ಕೃಷಿ ಭೂಮಿ ಜನವಸತಿ ಪ್ರದೇಶ ಮತ್ತು ಮೂಲಭೂತ ಸೌಕರ್ಯಕ್ಕೆ ಅನ್ವಯಿಸಬಾರದು ಎಂದು ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಶಿರಾಡಿ ಆಗ್ರಹಿಸಿದರು.

ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷೆ ಗಾಯತ್ರಿ, ಉಪಾಧ್ಯಕ್ಷ ಸುಧೀರ್ ಕುಮಾರ್ ಎಂ. ಎಸ್., ನಿಕಟಪೂರ್ವ ಅಧ್ಯಕ್ಷ ಹಾಗೂ ಮಲೆನಾಡು ಹಿತರಕ್ಷಣಾ ವೇದಿಕೆ ಸಮಿತಿ ಸದಸ್ಯ ನವೀನ್ ರೆಖ್ಯ, ಶಿಶಿಲ ಪಂಚಾಯತ್ ನಿಕಟಪೂರ್ವಾಧ್ಯಕ್ಷ ಸಂದೀಪ್ ಅಮ್ಮುಡಂಗೆ, ಮಲೆನಾಡು ಹಿತರಕ್ಷಣಾ ವೇದಿಕೆಯ ಜನ ಸಂಪರ್ಕ ಸಮಿತಿ ಸದಸ್ಯ ಕರುಣಾಕರ ಶಿಶಿಲ, ಗಣೇಶ್ ಕೆ. ಹೊಸ್ತೋಟ, ಧರ್ಮರಾಜ್ ಗೌಡ ಅಡ್ಕಾಡಿ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕ ಬೇಬಿ ಕಿರಣ್, ಸುಂದರ ಗೌಡ ಉಡ್ಯೆರೆ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

p>

LEAVE A REPLY

Please enter your comment!
Please enter your name here