ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಿಸ್ತಾರಗೊಂಡಿರುವ ಅನ್ನಪೂರ್ಣದ ಮೇಲಂತಸ್ತಿನಲ್ಲಿ ಸುಸಜ್ಜಿತ ಆಸನದ ವ್ಯವಸ್ಥೆಗಳನ್ನೊಳಗೊಂಡಿರುವ ಭೋಜನಾಲಯದ ಉದ್ಘಾಟನೆ ನ. 14 ರಂದು ನಡೆಯಿತು.
ಕಂಚಿ ಕಾಮಕೋಟಿ ಪೀಠಾಧೀಪತಿ ಜಗದ್ಗುರು ಶ್ರೀ ವಿಜಯೇಂದ್ರ ಸರಸ್ವತಿ ಶಂಕರಾಚಾರ್ಯ ಸ್ವಾಮೀಜಿಯವರು ಉದ್ಘಾಟಿಸಿ ಅನುಗ್ರಹ ಆಶೀರ್ವಚನ ಗೈದರು. ಅಧ್ಯಕ್ಷತೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ವಹಿಸಿದ್ದರು.
ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತಿ ಶ್ರೀ ಪಾದಂಗಳವರು ಆಶೀರ್ವಚನ ನೀಡಿದರು. ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ವಿಧಾನ ಪರಿಷತ್ ಮಾಜಿ ಸದಸ್ಯ ಕೆ. ಹರೀಶ್ ಕುಮಾರ ಡಿ., ಸುರೇಂದ್ರ ಕುಮಾರ್ ಉಪಸ್ಥಿತರಿದ್ದರು. ಡಿ. ಹರ್ಷೇಂದ್ರ ಕುಮಾರ್ ಸ್ವಾಗತಿಸಿದರು. ಉಪನ್ಯಾಸಕರುಗಳಾದ ಡಾ. ಶ್ರೀಧರ ಭಟ್ ಮತ್ತು ಸುನೀಲ್ ಪಂಡಿತ್ ನಿರೂಪಿಸಿದರು. ಅನ್ನಪೂರ್ಣದ ಮೆನೇಜರ್ ಸುಬ್ರಹ್ಮಣ್ಯ ಪ್ರಸಾದ್ ವಂದಿಸಿದರು. ಕ್ಷೇತ್ರದ ವಿವಿಧ ವಿಭಾಗದ ಮುಖ್ಯಸ್ಥರು, ಹೆಗ್ಗಡೆಯವರ ಕುಟುಂಬ ವರ್ಗದವರು ಹಾಜರಿದ್ದರು.
p>