ನಾರಾವಿ: ಸಂತ ಅಂತೋನಿ ಶಿಕ್ಷಣ ಸಂಸ್ಥೆಯಿಂದ ‘ಮಕ್ಕಳ ದಿನ -ಕ್ರೀಡಾಸಂಗಮ 2024’ ಅದ್ದೂರಿ ಆಚರಣೆ

0

ನಾರಾವಿ: ಸಂತ ಅಂತೋನಿ ಶಿಕ್ಷಣ ಸಂಸ್ಥೆಗಳು ಒಟ್ಟು ಸೇರಿ ನ.14ರಂದು ‘ಮಕ್ಕಳ ದಿನ -ಕ್ರೀಡಾಸಂಗಮ 2024’ ಎಂಬ ವಿಶಿಷ್ಟ ರೀತಿಯ ಕಾರ್ಯಕ್ರಮವನ್ನು ತುಂಬಾ ಅದ್ದೂರಿಯಿಂದ ಆಚರಿಸಿತು. ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಮಾತಾಡಿದ ಜೀ ಕನ್ನಡ ವಾಹಿನಿಯ ಜನಪ್ರಿಯ ಕಾರ್ಯಕ್ರಮವಾದ ಡ್ರಾಮಾ ಜೂನಿಯರ್ಸ್ ನ ಫೈನಲಿಸ್ಟ್ ಪುಟಾಣಿ ಅಪೂರ್ವ ಮಾಳ ಇವರು “ಮಕ್ಕಳು ನಿಂತ ನೀರಾಗಬಾರದು. ತಂದೆ ತಾಯಿಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಬೇಕು. ನನ್ನ ಸಾಧನೆಗೆ ನನ್ನ ಹೆತ್ತವರೇ ಸಂಪೂರ್ಣ ಕಾರಣಕರ್ತರು” ಎಂದರು.


ಅಧ್ಯಕ್ಷತೆಯನ್ನು ವಹಿಸಿದ್ದ ನಾರಾವಿ ಸಂತ ಅಂತೋನಿ ಶಿಕ್ಷಣ ಸಂಸ್ಥೆಗಳ ಸಂಚಾಲಕ ವಂ ಸ್ವಾ ಜೆರೋಮ್ ಡಿ’ಸೋಜಾ “ಕ್ರೀಡೆಯಿಂದ ಮಾತ್ರ ಒಗ್ಗಟ್ಟು ಮೂಡಲು ಸಾಧ್ಯವಿದೆ” ಎಂದರು.
ವೇದಿಕೆಯಲ್ಲಿ ಸಂತ ಅಂತೋನಿ ಪದವಿ ಕಾಲೇಜಿನ ಪ್ರಾಂಶುಪಾಲ ವಂ. ಡಾ. ಆಲ್ವಿನ್ ಸೆರಾವೋ, ನಾರಾವಿ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ಸಂಜಯ್ ಮಿರಾಂದ ಹಾಗೂ ಕಾರ್ಯದರ್ಶಿ ಎವ್ಜಿನ್ ರೋಡ್ರಿಗಸ್, ನಾರಾವಿ ಪ್ರೌಢಶಾಲೆ ಮುಖ್ಯೋಪಾಧ್ಯಾಯಿನಿ ಲಿಲ್ಲಿ ಪಾಯ್ಸ್, ಸಂತ ಪಾವ್ಲರ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಸೋಫಿಯಾ ಫೆರ್ನಾಂಡಿಸ್, ಸಂತ ಪಾವ್ಲರ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯನಿ ಸಿಸ್ಟರ್ ಸುಪ್ರಿತಾ ಕ್ರಾಸ್ತಾ ಉಪಸ್ಥಿತರಿದ್ದರು. ಸಂತ ಅಂತೋನಿ ಪದವಿ ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥ ಅವಿಲ್ ಮೋರಸ್ ತಮ್ಮ ಪ್ರಾಸ್ತಾವಿಕ ಮಾತುಗಳೊಂದಿಗೆ ಕಾರ್ಯಕ್ರಮದ ಉದ್ದೇಶವನ್ನು ತಿಳಿಸಿದರು.


ಸಂತ ಅಂತೋನಿ ಪದವಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಪ್ರದೀಪ್ ಬಿ ನಿರ್ದೇಶನದಲ್ಲಿ ಸಂಸ್ಥೆಯ ಎಲ್ಲಾ ವಿದ್ಯಾರ್ಥಿಗಳಿಗೆ ವಿಶೇಷ ರೀತಿಯ ಬೇರೆ ಬೇರೆ ಆಟೋಟ ಸ್ಪರ್ಧೆಗಳು ನಡೆದವು. ಪ್ರೊ. ಕಬಡ್ಡಿ ಮಾದರಿಯಲ್ಲಿ ನಡೆದ ಕಬ್ಬಡಿ ಪಂದ್ಯಾಟ ಹಾಗೂ ತ್ರೋಬಾಲ್ ಪಂದ್ಯಾಟವು ಎಲ್ಲರ ಗಮನವನ್ನು ಸೆಳೆಯಿತು. ಸಂತ ಪಾವ್ಲರ ಆಂಗ್ಲ ಮಾಧ್ಯಮ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಮಹೇಶ್ ಎಲ್ಲರನ್ನ ಸ್ವಾಗತಿಸಿದರು. ದೈಹಿಕ ಶಿಕ್ಷಣ ನಿರ್ದೇಶಕ ಪ್ರದೀಪ್ ಬಿ ಕಾರ್ಯಕ್ರಮವನ್ನು ನಿರೂಪಿಸಿ ಎಲ್ಲರಿಗೂ ಧನ್ಯವಾದವಿತ್ತರು.

p>

LEAVE A REPLY

Please enter your comment!
Please enter your name here