ಕಲ್ಮಂಜ : ಸ್ತ್ರೀ ಶಕ್ತಿ ಸರ್ವ ಸದಸ್ಯರ ಸಭೆ

0

ಕಲ್ಮಂಜ: ನ.16 ಶನಿವಾರ ದಂದು ಸಿದ್ದಬೈಲು ಪರಾರಿ ಅಂಗನವಾಡಿ ಕೇಂದ್ರದಲ್ಲಿ ಸ್ತ್ರೀ ಶಕ್ತಿ ಸರ್ವ ಸದಸ್ಯರ ಸಭೆ ನಡೆಸಲಾಯಿತು. ಸಭೆಯಲ್ಲಿ ವಾರ್ಷಿಕ ವರದಿಯನ್ನು ಶ್ವೇತಾ ಓದಿದರು. ಎಲ್ಲಾ ಗುಂಪುಗಳ ವರದಿ ಓದಿದ ನಂತರ, ಸಮುದಾಯ ಆರೋಗ್ಯ ಅಧಿಕಾರಿ ಆದ ರಂಜಿತಾ ಆರೋಗ್ಯದ ಬಗ್ಗೆ ಮಾಹಿತಿ ನೀಡಿದರು. ತದ ನಂತರ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ನಂತರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕೀ ಲಲಿತಾ ಸ್ತ್ರೀ ಶಕ್ತಿ ಗುಂಪುಗಳಿಗೆ ಗುಂಪು ಗಳ ನಿರ್ವಣೆಯ ಬಗ್ಗೆ ಮಾರ್ಗದರ್ಶನ ನೀಡಿದರು. ವಸಂತಿ ಅಂಗನವಾಡಿ ಕಾರ್ಯಕರ್ತೆ ಕಾರ್ಯಕ್ರಮ ನಿರೂಪಿಸಿದರು, ವಿದ್ಯಾ ಧನ್ಯವಾದವಿತ್ತರು.

p>

LEAVE A REPLY

Please enter your comment!
Please enter your name here