ಉಜಿರೆ: ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಎಸ್.ಡಿ.ಎಂ ಮಹಿಳಾ ಐ.ಟಿ.ಐ ಪ್ರಥಮ

0

ಉಜಿರೆ: ಮಂಗಳೂರಿನ ಸೈಂಟ್ ಅಲೋಶಿಯಸ್ ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿಗಳ ಸಂಘ ಹಾಗೂ ರಿಯಲ್ ಎಸ್ಟೇಟ್ ಗ್ರೂಪ್ ಜಂಟಿ ಸಹಯೋಗದಲ್ಲಿ ನ. 17ರಂದು ನಡೆದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಮಟ್ಟದ ಅಂತರ್ ಐ.ಟಿ.ಐ ವಾಲಿಬಾಲ್ ಮತ್ತು ತ್ರೋಬಾಲ್ ಪಂದ್ಯಾವಳಿಯ ತ್ರೋಬಾಲ್ ಪಂದ್ಯದಲ್ಲಿ ಉಜಿರೆ ಎಸ್.ಡಿ.ಎಂ. ಮಹಿಳಾ ಐ.ಟಿ.ಐ ಪ್ರಥಮ ಸ್ಥಾನ ಗಳಿಸಿದೆ.


ಪಂದ್ಯದಲ್ಲಿ ನಾಲ್ಕು ಕೈಗಾರಿಕಾ ತರಬೇತಿ ಸಂಸ್ಥೆಗಳ (ಐಟಿಐ) ವಿದ್ಯಾರ್ಥಿನಿಯರು ಭಾಗವಹಿಸಿದ್ದು, ವಾಮಂಜೂರಿನ ಎಸ್.ಡಿ.ಎಂ. ಮಂಗಳಜ್ಯೋತಿ ಐಟಿಐ ರನ್ನರ್ ಅಪ್ ಪ್ರಶಸ್ತಿ ಪಡೆದುಕೊಂಡಿದೆ. ಪ್ರಥಮ ಸ್ಥಾನ ವಿಜೇತ ತಂಡಕ್ಕೆ ಟ್ರೋಫಿಯೊಂದಿಗೆ 3,000 ರೂ. ನಗದು ಬಹುಮಾನ ಲಭಿಸಿದ್ದು, ಲಾವಣ್ಯಾ ‘ಉತ್ತಮ ಎಸೆತಗಾರ್ತಿ’ ಹಾಗೂ ಮಂಜುಳಾ ‘ಆಲ್ ರೌಂಡರ್’ ಪ್ರಶಸ್ತಿ ಪಡೆದಿದ್ದಾರೆ.


ನ. 20ರಂದು ವಿದ್ಯಾರ್ಥಿನಿಯರನ್ನು ಎಸ್.ಡಿ.ಎಂ. ಎಜುಕೇಶನಲ್ ಸೊಸೈಟಿಯ ಅಧ್ಯಕ್ಷ ಡಿ. ವೀರೇಂದ್ರ ಹೆಗ್ಗಡೆ, ಹೇಮಾವತಿ ವೀ. ಹೆಗ್ಗಡೆ, ಕಾರ್ಯದರ್ಶಿಗಳಾದ ಡಿ. ಹರ್ಷೇಂದ್ರ ಕುಮಾರ್ ಮತ್ತು ಡಾ. ಸತೀಶ್ಚಂದ್ರ ಎಸ್., ಎಸ್.ಡಿ.ಎಂ. ಸ್ಪೋರ್ಟ್ಸ್ ಕ್ಲಬ್ ಕಾರ್ಯದರ್ಶಿ ರಮೇಶ್, ಕಾಲೇಜಿನ ಪ್ರಾಂಶುಪಾಲ ವಿ. ಪ್ರಕಾಶ್ ಕಾಮತ್ ಹಾಗೂ ಅಧ್ಯಾಪಕ ವೃಂದದವರು ಅಭಿನಂದಿಸಿದ್ದಾರೆ.

p>

LEAVE A REPLY

Please enter your comment!
Please enter your name here