ಧರ್ಮಸ್ಥಳ: ಲಕ್ಷ ದೀಪೋತ್ಸವದ ಅಂಗವಾಗಿ ಶ್ರೀ ಮಂಜುನಾಥೇಶ್ವರ ಪ್ರೌಢ ಶಾಲಾ ಕ್ರೀಡಾಂಗಣದಲ್ಲಿ ನಡೆಯಲಿರುವ ರಾಜ್ಯ ಮಟ್ಟದ ವಸ್ತು ಪ್ರದರ್ಶನದ ಉದ್ಘಾಟನೆ ನ. 26 ರಂದು ನಡೆಯಿತು.
ಯೂನಿಸೆಫ್ ಹೈದರಾಬಾದ್ ಕಚೇರಿ ಮುಖ್ಯಸ್ಥ ಡಾ. ಝೆಲಾಲೆಮ್ ಉದ್ಘಾಟಿಸಿದರು. ವಿವಿಧ ಮಳಿಗೆಗಳನ್ನು ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ಬ್ಯಾಂಕ್ ಜನರಲ್ ಮೆನೇಜರ್ ವೆಂಕಟೇಶ್, ಭಾರತೀಯ ಜೀವ ವಿಮಾ ನಿಗಮದ ಸೀನಿಯರ್ ಡಿವಿಜನಲ್ ಮೆನೇಜರ್ ರಾಜೇಶ್ ಮುದೋಳ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅನಿಲ್ ಕುಮಾರ್. ಎಸ್. ಎಸ್., ಪ್ರಾದೇಶಿಕ ನಿರ್ದೇಶಕ ದುಗ್ಗೆ ಗೌಡ, ಸಮುದಾಯದ ಅಭಿವೃದ್ಧಿ ಯೋಜನೆ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ, ಸಿರಿ ಗ್ರಾಮೋದ್ಯಗ ಸಂಸ್ಥೆಯ ನಿರ್ದೇಶಕ ಜನಾರ್ದನ, ವಿವಿಧ ಸಂಘ ಸಂಸ್ಥೆಗಳ ಪ್ರಮುಖರು, ವಸ್ತು ಪ್ರದರ್ಶನ ಮಳಿಗೆಯ ಮುಖ್ಯಸ್ಥರು, ಕ್ಷೇತ್ರದ ವಿವಿಧ ಇಲಾಖೆಯ ಮುಖ್ಯಸ್ಥರು, ಯೋಜನೆಯ ನಿರ್ದೇಶಕರು, ಮೇಲ್ವಿಚಾರಕರು, ನಾಗರೀಕರು ಉಪಸ್ಥಿತರಿದ್ದರು.