p>
ಬಡಗಕಾರಂದೂರು: ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಡಿ. 21 ರಂದು ಜರುಗಲಿರುವ ಪ್ರತಿಭಾ ದಿನಾಚರಣೆ ಕಾರ್ಯಕ್ರಮದ ಪೂರ್ವಭಾವಿಯಾಗಿ ಎಸ್. ಡಿ. ಎಂ. ಸಿ ಸಮಾಲೋಚನಾ ಸಭೆಯು ಡಿ. 9 ರಂದು ಜರುಗಿತು. ಸಭೆಯ ಅಧ್ಯಕ್ಷತೆಯನ್ನು ಎಸ್. ಡಿ. ಎಂ. ಸಿ ಅಧ್ಯಕ್ಷ ಶಶಿಕಾಂತ್ ನಾಯಕ್ ಪಾಲಬೆ ವಹಿಸಿದ್ದರು.
ಶಾಲಾಭಿವೃದ್ಧಿ ಚಟುವಟಿಕೆಗಳು ಹಾಗೂ ಯೋಜಿತ ಗುರಿ ಉದ್ದೇಶಗಳ ಕುರಿತು ಚರ್ಚೆ ನಡೆಸಲಾಯಿತು. ಸಭೆಯಲ್ಲಿ ಸಮಿತಿಯ ಉಪಾಧ್ಯಕ್ಷೆ ರೂಪಾ, ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಹರೀಶ್ ಕುಲಾಲ್, ಎಸ್. ಡಿ. ಎಂ. ಸಿ ಸದಸ್ಯರುಗಳು, ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯ ಸುರೇಶ್ ಎನ್ ಸ್ವಾಗತಿಸಿದರು, ಸಹಶಿಕ್ಷಕಿ ಮಂಗಳಾ ಸಭೆ ನಿರ್ವಹಿಸಿ ವಂದನಾರ್ಪಣೆ ಸಲ್ಲಿಸಿದರು.