

ವೇಣೂರು: ಕರ್ನಾಟಕ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ ಮತ್ತು ಶಾಲಾ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು, ಕಾರ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು, ಕಾರ್ಕಳದಲ್ಲಿ ಡಿ. 9ರಂದು ನಡೆದ 2024-25ನೇ ಶೈಕಣಿಕ ಸಾಲಿನ ಪದವಿ ಪೂರ್ವ ವಿದ್ಯಾರ್ಥಿಗಳ ಮೈಸೂರು ವಿಭಾಗೀಯ ಮಟ್ಟದ ಕನ್ನಡ ಚರ್ಚಾ ಸ್ಪರ್ಧೆಯಲ್ಲಿ ವೇಣೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿನಿ ನಿರೀಕ್ಷಾ ಎನ್. ಪೂಜಾರಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.