p>
ಅಳದಂಗಡಿ: ಗ್ರಾಮ ಪಂಚಾಯಿತಿ ವತಿಯಿಂದ ಮಕ್ಕಳ ಗ್ರಾಮಸಭೆಯು ಪಂಚಾಯತ್ ಸಭಾಭವನದಲ್ಲಿ ಜರುಗಿತು. ಸಭೆಯ ಅಧ್ಯಕ್ಷತೆಯನ್ನು ಸ. ಉ. ಪ್ರಾ ಶಾಲೆ ಬಡಗಕಾರಂದೂರು ಇಲ್ಲಿನ ಶ್ವೇತಾ ವಹಿಸಿದ್ದರು.
ಸಭೆಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಸರಸ್ವತಿ, ಉಪಾಧ್ಯಕ್ಷೆ ಶಾಲಿನಿ, ಸದಸ್ಯರಾದ ಕೃಷ್ಣಪ್ಪ ಪೂಜಾರಿ ಬಿಕ್ಕಿರ, ಹರೀಶ್ ಆಚಾರ್ಯ ಮಿತ್ತರೋಡಿ, ರವಿ ಸುಲ್ಕೇರಿಮೊಗ್ರು, ರೂಪಶ್ರೀ ಸುಲ್ಕೇರಿಮೊಗ್ರು, ಪಿ.ಡಿ.ಒ ಪೂರ್ಣಿಮಾ, ಪಂಚಾಯತ್ ವ್ಯಾಪ್ತಿಗೆ ಒಳಪಟ್ಟ ಶಾಲಾ ಶಿಕ್ಷಕರು ಹಾಗೂ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.