p>
ವೇಣೂರು: ಮಹಾಸಂಸ್ಥಾನದ ಶ್ರೀ ಸರ್ವಜ್ಞಂದ್ರ ಸರಸ್ವತೀ ಪ್ರತಿಷ್ಠಾನ ಶಿರಸಿ ಸಂಯೋಜಿಸಿದ ಶ್ರೀ ಭಗವದ್ಗೀತಾ ಅಭಿಯಾನ ಕರ್ನಾಟಕ – 2024 ಕಾರ್ಯಕ್ರಮದಡಿ ವಿಜಯಪುರದಲ್ಲಿ ನಡೆದ ರಾಜ್ಯ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿ ಮೂಡಬಿದ್ರೆ ಕಲ್ಲಬೆಟ್ಟು ಎಕ್ಷೆಲೆಂಟ್ ಇಂಗ್ಲಿಷ್ ಮೀಡಿಯಂ ಶಾಲಾ ವಿದ್ಯಾರ್ಥಿನಿ ಸರ್ವದ ಕೆ. ಎಸ್. ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದರು.
ಇವರನ್ನು ಶ್ರೀ ಸೋಂದಾಸ್ವರ್ಣವಲ್ಲಿ ಮಹಾ ಸಂಸ್ಥಾನ ಶಿರಸಿಯ ಶ್ರೀಮದ್ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳ ಉಪಸ್ಥಿತಿಯಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ವೇಣೂರು ಸರಕಾರಿ ಪ. ಪೂ. ಕಾಲೇಜು ಭೌತಶಾಸ್ತ್ರ ಉಪನ್ಯಾಸಕಿ ಶಾಲಿನಿ ಬಿ. ಕರ್ಕೇರರ ಪುತ್ರಿ. ಪ್ರಾಥಮಿಕ ಶಾಲಾ ವಿಭಾಗದ ‘ಭಗವದ್ಗೀತೆಯಿಂದ ಸಾಮಾಜಿಕ ಸಾಮರಸ್ಯ’ ಎಂಬ ವಿಷಯದಲ್ಲಿ ಭಾಷಣವನ್ನು ಮಾಡಿದರು.