p>
ಬಂದಾರು: ಪೆರ್ಲ – ಬೈಪಾಡಿ ಶ್ರೀ ಸಿದ್ದಿ ವಿನಾಯಕ ದೇವಸ್ಥಾನದ ಬ್ರಹ್ಮ ಕಲಶೋತ್ಸವಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ಕಾರ್ಯಕ್ರಮದಡಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 2 ಲಕ್ಷದ ಡಿ. ಡಿ ಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬೆಳ್ತಂಗಡಿ ತಾಲೂಕು ಯೋಜನಾಧಿಕಾರಿ ಸುರೇಂದ್ರ ಕುಮಾರ್ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಮಹಾಬಲ ಗೌಡರಿಗೆ ಹಸ್ತಾಂತರ ಮಾಡಿದರು.
ಈ ಸಂದರ್ಭದಲ್ಲಿ ಉಜಿರೆ ವಲಯದ ಮೇಲ್ವಿಚಾರಕಿ ವನಿತಾ, ಬೈಪಾಡಿ ಕಾರ್ಯಕ್ಷೇತ್ರದ ಸೇವಾಪ್ರತಿನಿದಿ ಪ್ರಮೀಳಾ, ಆಡಳಿತ ಮಂಡಳಿಯ ಅಧ್ಯಕ್ಷ ರಮೇಶ ಗೌಡ, ಸಮಿತಿಯ ಸದಸ್ಯರು, ಬೈಪಾಡಿ ಒಕ್ಕೂಟದ ಅಧ್ಯಕ್ಷ ಶಶಿಧರ ಗೌಡ, ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.
p>