ಬೆಳಾಲು: ಬಾಲ ವಿಕಾಸ ಸಮಿತಿ ಮತ್ತು ಊರವರ ಸಹಕಾರದಲ್ಲಿ ಕೊಲ್ಪಾಡಿ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಮತ್ತು ನಿವೃತ್ತರಿಗೆ ಗೌರವಾರ್ಪಣೆ ಡಿ. 13 ರಂದು ನಡೆಯಿತು.
ಜಿಲ್ಲಾ ಸ್ತ್ರೀ ಶಕ್ತಿ ಒಕ್ಕೂಟದ ಉಪಾಧ್ಯಕ್ಷೆ ನಿಶಾ ಯಶವಂತ ಗೌಡ ಕಾರ್ಯಕ್ರಮ ಉದ್ಘಾಟಿಸಿದರು.
ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ ಗೌಡ, ಕೊಲ್ಪಾಡಿ ಸ. ಕಿ. ಪ್ರಾ. ಶಾಲಾ ಮುಖ್ಯ ಶಿಕ್ಷಕ ಸುರೇಶ್ ಎಂ., ಗ್ರಾಮ ಪಂಚಾಯತ್ ಸದಸ್ಯರುಗಳಾದ ಸುರೇಂದ್ರ ಗೌಡ, ಕೃಷ್ಣಯ್ಯ ಆಚಾರ್ಯ, ಅಂಗನವಾಡಿ ಮೇಲ್ವಿಚಾರಕಿ ಲಲಿತಾ ಮುಖ್ಯ ಅತಿಥಿಗಳಾಗಿ ಭಾಗಾವಹಿಸಿದ್ದರು.
ಮಾಸ್ಟರ್ ಪ್ರಾಣೇಶ್ ಅಧ್ಯಕ್ಷತೆ ವಹಿಸಿದ್ದರು. ಬಾಲವಿಕಾಸ ಸಮಿತಿ ಅಧ್ಯಕ್ಷೆ ಆಶಾ ಹರೀಶ್, ಗೊಂಚಲು ಸ್ತ್ರೀ ಶಕ್ತಿ ಸಂಘದ ಅಧ್ಯಕ್ಷೆ ಆಶಾ ಸುರೇಶ್ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ 42 ವರ್ಷಗಳ ಕಾಲ ಅಂಗನವಾಡಿ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಲೀಲಾ ಎಸ್. ಸಹಾಯಕಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಸುಶೀಲರನ್ನು ಗೌರವಿಸಲಾಯಿತು.
ಪ್ರಬಾರ ಅಂಗನವಾಡಿ ಕಾರ್ಯಕರ್ತೆ ಭಾರತಿ ಸ್ವಾಗತಿಸಿ, ಚೈತ್ರಾ ಧರ್ಣಪ್ಪ ಪ್ರಸ್ತಾವಿಕವಾಗಿ ಮಾತನಾಡಿದರು. ಮಕ್ಕಳಿಂದ ಮನೋರಂಜನಾ ಕಾರ್ಯಕ್ರಮ ನಡೆಯಿತು. ಆಶಾ ಕಾರ್ಯಕರ್ತೆ ಪ್ರೇಮ, ಭವ್ಯ ಸನ್ಮಾನ ಪತ್ರ ವಾಚಿಸಿದರು. ಕರಿಯಣ್ಣ ಗೌಡ ನಿರೂಪಿಸಿ, ರಾಜೇಶ್ ಬರೆಮೇಲು ವಂದಿಸಿದರು.