p>
ಬೆಳ್ತಂಗಡಿ: ಹೇಮಾವತಿಯವರ ಆಶಯದಲ್ಲಿ ನಡೆಯುವ ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಬೆಳ್ತಂಗಡಿ ಯೋಜನಾ ವ್ಯಾಪ್ತಿಯ 233 ಅಸಹಾಯಕ ಕುಟುಂಬಗಳಿಗೆ ಪ್ರತಿ ತಿಂಗಳು 2,37,000 ಮಾಸಾಶನ ನೀಡಲಾಗುತ್ತಿದ್ದು, ಇದರಲ್ಲಿ ತೀರಾ ಅಸಹಾಯಕವಾಗಿರುವ 12 ವಾತ್ಸಲ್ಯ ಕುಟುಂಬದ ಸದಸ್ಯರಿಗೆ ಮಂಜುರಾದ ದಿನ ಬಳಕೆ ವಸ್ತುಗಳಾದ ಬಟ್ಟೆ, ಚಾಪೆ, ತಲೆದಿಂಬು, ಬೆಡ್ ಶಿಟ್ ಹಾಗೂ ಆಹಾರ ಕಿಟ್ ಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಜ್ಞಾನ ವಿಕಾಸ ಕಾರ್ಯಕ್ರಮದ ನಿರ್ದೇಶಕ ವಿಠಲ ಪೂಜಾರಿ, ಉಡುಪಿ ಪ್ರಾದೇಶಿಕ ವ್ಯಾಪ್ತಿಯ ಜ್ಞಾನ ವಿಕಾಸ ಯೋಜನಾಧಿಕಾರಿ ಅಮೃತಾ ಹಾಗೂ ತಾಲೂಕಿನ ಯೋಜನಾಧಿಕಾರಿ ಸುರೇಂದ್ರ ಉಪಸ್ಥಿತರಿದ್ದು, ಸದಸ್ಯರ ಅರೋಗ್ಯ ಹಾಗೂ ಮೂಲಭೂತ ಸೌಕರ್ಯಗಳ ಅವಶ್ಯಕತೆಗಳ ಬಗ್ಗೆ ಗುರುತಿಸಿ ಮಾರ್ಗದರ್ಶನ ನೀಡಿದರು.
ಈ ಸಂದರ್ಭದಲ್ಲಿ ಜ್ಞಾನ ವಿಕಾಸ ಸಮನ್ವಯಧಿಕಾರಿ ಮಧುರ, ಸ್ಥಳೀಯ ಸೇವಾಪ್ರತಿನಿಧಿಗಳು, ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.