p>
ಉದನೆ: ಶಿರಾಡಿ ಗ್ರಾಮದ ಕಳಪ್ಪಾರು ಎಂಬಲ್ಲಿ ವ್ಯಕ್ತಿ ಆಸಿಡ್ ಸೇವಿಸಿ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಜ. 5 ರಂದು ವರದಿಯಾಗಿದೆ.
ಮೃತಪಟ್ಟ ವ್ಯಕ್ತಿಯನ್ನು ಮಾಧವ ಗೌಡ(64) ಎಂದು ಗುರುತಿಸಲಾಗಿದೆ.
ಯಾವುದೋ ಕಾರಣಕ್ಕೆ ಮನನೊಂದು ರಬ್ಬರ್ ತೋಟಕ್ಕೆ ಉಪಯೋಗಿಸುವ ಆಸಿಡ್ ಸೇವನೆ ಮಾಡಿ ಬೊಬ್ಬೆ ಹೊಡೆಯುತ್ತಿದ್ದವರನ್ನು 108 ಆಂಬ್ಯುಲೆನ್ಸ್ ನಲ್ಲಿ ಚಿಕಿತ್ಸೆಗೆ ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆತಂದಾಗ, ಅಲ್ಲಿನ ವೈದ್ಯರು ಪರೀಕ್ಷಿಸಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ಕೊಂಡು ಹೋಗುವಂತೆ ತಿಳಿಸಿದ್ದರು.
ಮಂಗಳೂರು ಆಸ್ಪತ್ರೆಗೆ ಹೋಗುವ ಸಮಯ ದಾರಿ ಮಧ್ಯೆ ಯಾವುದೇ ರೀತಿಯಲ್ಲಿ ಸ್ಪಂದನೆ ಇಲ್ಲದ ಕಾರಣ ವಾಪಾಸ್ಸು ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದಾಗ ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ ಎಂಬುದಾಗಿ ಮಗ ಮಂಜುಪ್ರಸಾದ್ ಎಂಬವರು ನೀಡಿದ ದೂರಿನಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.