p>
ಬೆಳ್ತಂಗಡಿ: ಹಿಂದೂಗಳ ಮೇಲೆ ಅಮಾನವೀಯ ದಾಳಿಯನ್ನು ಖಂಡಿಸಿ ಧರ್ಮಪ್ರೇಮಿಗಳು ಮತ್ತು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಜ. 8 ರಂದು ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಮೌನ ಪ್ರತಿಭಟನೆ ನಡೆಯಿತು. ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಿರಂತರ ದಾಳಿ ನಡೆಯುತ್ತಿದ್ದು ಬಾಂಗ್ಲಾದೇಶದ 64 ಜಿಲ್ಲೆಗಳ ಪೈಕಿ 52 ಜಿಲ್ಲೆಗಳಲ್ಲಿ ಹಿಂದೂ ವಿರೋಧಿ ಹಿಂಸಾಚಾರದ ಘಟನೆಗಳು ನಡೆದಿವೆ.
ಶೇಖ್ ಹಸೀನಾ ಸರಕಾರ ರಾಜೀನಾಮೆ ನೀಡಿದ ನಂತರ ಹಿಂದೂಗಳ ಮೇಲಿನ ಹಲ್ಲೆಗಳು ಹೆಚ್ಚಾಗುತ್ತಿವೆ. ಪ್ಲೆಕಾರ್ಡ್ಸ್ ಹಿಡಿದು ಜನರಲ್ಲಿ ಜಾಗೃತಿಯನ್ನು ಮೂಡಿಸಲಾಯಿತು. ಸಂದರ್ಭದಲ್ಲಿ ಸದಾಶಿವ ಶೆಟ್ಟಿ ಅರುವ, ಪರಮೇಶ್ವರ ಎಂ., ಶ್ರೀನಿವಾಸ ಸಿ., ಬಾಲಕೃಷ್ಣ ಗೌಡ ರೆಕ್ಯ, ರಾಘವೇಂದ್ರ ಕಾಮತ್ ಉಜಿರೆ, ಸೌ.ಸೌಮ್ಯ ಬಂದಾರು, ಹಿಂದೂ ಜನಜಾಗೃತಿ ಸಮಿತಿಯ ಕಾರ್ಯಕರ್ತರು ಹಾಗೂ ಧರ್ಮ ಪ್ರೇಮಿಗಳು ಉಪಸ್ಥಿತರಿದ್ದರು.
ಶ್ರೀ ವಿಜಯ ಕುಮಾರ್ .
ಜಿಲ್ಲಾ ಸಮನ್ವಯಕರು, ಹಿಂದೂ ಜನಜಾಗೃತಿ ಸಮಿತಿ.
ಸಂ. ಕ್ರ: 7204082652