

ವೇಣೂರು: ಎಸ್. ಎಸ್. ಎಲ್. ಸಿ. ಶಿಕ್ಷಣದ ನಂತರದ ಶೈಕ್ಷಣಿಕ ಅವಕಾಶಗಳ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ, ಜ. 25 ರಂದು 4 ಗಂಟೆಗೆ ವೇಣೂರಿನ ಭರತೇಶ ಸಮುದಾಯ ಭವನದಲ್ಲಿ ಶಿಕ್ಷಣ ಮಾರ್ಗದರ್ಶನ ಕಾರ್ಯಕ್ರಮ ನಡೆಯಲಿದೆ.
ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಭವಿಷ್ಯದ ಶೈಕ್ಷಣಿಕ ಅವಕಾಶಗಳ ಕುರಿತು ಮಾರ್ಗದರ್ಶನ ನೀಡಲಿದ್ದಾರೆ. ವಿದ್ಯಾರ್ಥಿಗಳ ಹೆತ್ತವರು, ಶಿಕ್ಷಣ ಪ್ರೇಮಿಗಳು ಭಾಗವಹಿಸಿ ಸದುಪಯೋಗ ಪಡೆದುಕೊಳ್ಳಬಹುದು ಎಂದು ಉಪನ್ಯಾಸಕ ಗುಣಪ್ರಸಾದ್ ತಿಳಿಸಿದ್ದಾರೆ.