ಜ. 28: ಇಂದಬೆಟ್ಟಿನಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಶಿಬಿರ – ಪತ್ರಿಕಾಗೋಷ್ಠಿ

0

ಬೆಳ್ತಂಗಡಿ: ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅರ್ಹ ಫಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಶಿಬಿರ ಜ. 28 ರಂದು ಬೆಳಿಗ್ಗೆ 10 ಗಂಟೆಯಿಂದ ಇಂದಬೆಟ್ಟು ಸಂತ ಕ್ಷೇವಿಯಾರ್ ಚರ್ಚ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಗ್ಯಾರಂಟಿ ಯೋಜನೆಗಳ ಆನುಷ್ಟಾನಾ ಸಮಿತಿಯ ಅಧ್ಯಕ್ಷ ಪದ್ಮನಾಭಾ ಸಾಲಿಯಾನ್ ಹೇಳಿದರು. ಅವರು ಜ. 23 ರಂದು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಕರೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದರು.

ಈ ಅನುಷ್ಠಾನ ಶಿಬಿರದಲ್ಲಿ ಮಲವಂತಿಗೆ, ಮಿತ್ತಬಾಗಿಲು, ಕಡಿರುದ್ಯಾವರ, ನಡ, ನಾವೂರು, ಇಂದಬೆಟ್ಟು ಗ್ರಾಮಗಳ ಪಂಚ ಗ್ಯಾರಂಟಿ ಯೋಜನೆಗಳ ಪಲಾನಿಭವಿಗಳು ಭಾಗವಹಿಸಿ ಮಾಹಿತಿ ಪಡೆಯಬಹುದು. ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಇಲಾಖೆಯ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರು ಭಾಗವಹಿಸಿ ಮಾಹಿತಿ ನೀಡಲಿದ್ದಾರೆ.

ಮುಂದಿನ ದಿನದಲ್ಲಿ ತಾಲೂಕಿನ ಎಲ್ಲಾ ಹೋಬಳಿಗಳಲ್ಲಿ ಈ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಶಿಬಿರವು ನಡೆಸಲಾಗುವುದು ಎಂದರು. ಪತ್ರಿಕಾ ಗೋಷ್ಠಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷ ಶೇಖ‌ರ್ ಕುಕ್ಕೆಡಿ, ಜಿಲ್ಲಾ ಕೆ. ಡಿ. ಪಿ ಸದಸ್ಯ ಸಂತೋಷ್ ಕುಮಾರ್, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರಾದ ನೇಮಿರಾಜ್ ಕಿಲ್ಲೂರು, ಸೌಮ್ಯ ಲಾಯಿಲ, ಮೇರಿಟ ಪಿಂಟೋ, ಯತೀಶ್ ಧರ್ಮಸ್ಥಳ, ವೀರಪ್ಪ ಮೋಯಿಲಿ, ವಾಸುದೇವಭಟ್, ವಂದನ ಭಂಡಾರಿ, ಅಬ್ದುಲ್ ಸಲಾಂ ಮರೋಡಿ, ಸತೀಶ್ ಹೆಗ್ಡೆ ವೇಣೂರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here