ಬೆಳ್ತಂಗಡಿ: ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆ ಲಾಯಿಲ ಇಲ್ಲಿ 76ನೇ ವರ್ಷದ ಗಣರಾಜ್ಯೋತ್ಸವವನ್ನು ಬಹಳ ಅರ್ಥಪೂರ್ಣವಾಗಿ ಆಚರಿಸಲಾಯಿತು. ಶಾಲಾ ಸಂಚಾಲಕಿ ಸಿಸ್ಟರ್ ಎಲ್ಸಿ ಪಾಲಾಟ್ ಧ್ವಜಾರೋಹಣವನ್ನು ನೆರವೇರಿಸಿದರು .
ಧ್ವಜಾರೋಹಣದ ಬಳಿಕ ಶಾಲಾ ಮುಖ್ಯ ಶಿಕ್ಷಕಿ ಸಿಸ್ಟರ್ ಪ್ರೀತಿ ಜಾರ್ಜ್ ಸಂವಿಧಾನ ಶಿಲ್ಪಿ ಡಾ. ಬಿ. ಆರ್ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.
ಶಾಲಾ ಸಹ ಶಿಕ್ಷಕಿ ಶ್ರೀಜಾ ಗಣರಾಜ್ಯೋತ್ಸವದ ಮಹತ್ವದ ಕುರಿತು ಮಾತನಾಡಿದರು. ಬಳಿಕ ವಿದ್ಯಾರ್ಥಿಗಳಾದ ಶ್ರೇಯಾ ಹಾಗೂ ಸುಮೇಧ ಕೃಷ್ಣ ಪ್ರಜಾಪ್ರಭುತ್ವ ದಿನದ ಕುರಿತಾಗಿ ಮಾತನಾಡಿ, ಆರಾಧ್ಯ ದೇಶಭಕ್ತಿಗೀತೆಯನ್ನು ಹಾಡಿ ಕಾರ್ಯಕ್ರಮದ ಮೆರುಗನ್ನು ಹೆಚ್ಚಿಸಿದರು.
ಕಾರ್ಯಕ್ರಮದ ನಿರೂಪಣೆಯನ್ನು ಕುಸುಮಾ ನಿರ್ವಹಿಸಿದರು. ಸಿಹಿತಿಂಡಿಯೊಂದಿಗೆ ಕಾರ್ಯಕ್ರಮವು ಪರಿಸಮಾಪ್ತಿಯಾಯಿತು.