


ಬೆಳ್ತಂಗಡಿ: ಗಂಡಿಬಾಗಿಲು ಹಾಲು ಉತ್ಪಾದಕರ ಸಹಕಾರಿ ಸಂಘದ ನೂತನ ಸಮೃದ್ಧಿ ಕಟ್ಟಡದ ಉದ್ಘಾಟನಾ ಕಾರ್ಯಕ್ರಮ ಫೆ. 4 ರಂದು ಸಂಘದ ವಠಾರದಲ್ಲಿ ನಡೆಯಲಿದೆ.
ದ.ಕ. ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಕೆ.ಪಿ.ಸುಚರಿತ ಶೆಟ್ಟಿ ಕಟ್ಟಡ ಉದ್ಘಾಟಿಸಲಿದ್ದಾರೆ.


ಶಾಸಕ ಹರೀಶ್ ಪೂಂಜ ಕಚೇರಿ ಉದ್ಘಾಟಿಸಲಿದ್ದು, ಪಶು ಆಹಾರ ಗೋದಾಮು ಉದ್ಘಾಟನೆಯನ್ನು ಒಕ್ಕೂಟದ ಉಪಾಧ್ಯಕ್ಷ ಎಸ್.ಬಿ. ಜಯರಾಮ ರೈ ಬಳಜ್ಜ ಹಾಗೂ ನಾಮಫಲಕದ ಉದ್ಘಾಟನೆಯನ್ನು ಕ.ಹಾ.ಮ.ಬೆಂಗಳೂರು ಇದರ ನಿರ್ದೇಶಕ ಕಾಪು ದಿವಾಕರ ಶೆಟ್ಟಿ ನೆರವೇರಿಸಲಿದ್ದಾರೆ.
ಸಭಾ ಕಾರ್ಯಕ್ರಮ ಸಂತ ತೋಮಸರ ಸಭಾಭವನದಲ್ಲಿ ನಡೆಯಲಿದೆ ಎಂದು ತಿಳಿಸಿದೆ.









