ಇನ್‌ಸ್ಟಾಗ್ರಾಂನಲ್ಲಿ ಮತ್ತೊಂದು ಯುವತಿಗೆ ಲೈಕ್‌ – ನಿಶ್ಚಿತಾರ್ಥವಾದ ಯುವತಿ ಪ್ರಶ್ನೆ- ದೈವಪಾತ್ರಿ ಚೇತನ್ ಆತ್ಮಹತ್ಯೆ

0

ಬೆಳ್ತಂಗಡಿ: ಸಾಮಾಜಿಕ ಜಾಲತಾಣವಾದ ಇನ್‌ಸ್ಟಾ ಗ್ರಾಮ್‌ನಲ್ಲಿ ಮತ್ತೊಂದು ಯುವತಿಗೆ ಲೈಕ್ ನೀಡಿರುವುದನ್ನು ವಿವಾಹ ನಿಶ್ಚಿತಾರ್ಥವಾದ ಯುವತಿ ಪ್ರಶ್ನೆ ಮಾಡಿದ್ದರಿಂದ ನೊಂದು ದೈವಪಾತ್ರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುರಿತು ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.

ಘಟನೆಯ ವಿವರ: ಕುಕ್ಕಿಪ್ಪಾಡಿ ಗ್ರಾಮದ ಎಲ್ಲೇಲು ಎಂಬಲ್ಲಿಯ ದಿ. ಯೋಗೀಶ್ ಅವರ ಪುತ್ರ ಚೇತನ್ (25) ದೈವದ ಪಾತ್ರಿಯಾಗಿ ಕೆಲಸ ಮಾಡಿಕೊಂಡಿದ್ದರು. ಅವರಿಗೆ ಇನ್‌ಸ್ಟಾಗ್ರಾಮ್‌ನಲ್ಲಿ ಪರಿಚಯವಾದ ಕಂದಾವರ ಗ್ರಾಮದ ಓಣಿಬಾಗಿಲು ಮನೆ ನಿವಾಸಿ ಬಾಬು ಅವರ ಪುತ್ರಿ ಚೈತನ್ಯಾ ಅವರೊಂದಿಗೆ 8 ತಿಂಗಳ ಹಿಂದೆ ಮದುವೆ ನಿಶ್ಚಯವಾಗಿತ್ತು. ಚೇತನ್ ಅವರ ತಾಯಿ ಪುಷ್ಪಾ ಅವರು ಜ.21ರಂದು ತನ್ನ ತವರು ಮನೆಗೆ ಹೋಗಿದ್ದರಿಂದ ತನ್ನ ಮನೆಯಲ್ಲಿ ಚೇತನ್ ಮಾತ್ರ ಇದ್ದರು. ಈ ವೇಳೆ ಅಲ್ಲಿಗೆ ಬಂದಿದ್ದ ಚೈತನ್ಯಾ ಅವಳ ಮೊಬೈಲ್ ಫೋನ್‌ನಿಂದ ಪುಷ್ಪಾ ಅವರಿಗೆ ಕರೆ ಮಾಡಿ ನಾನು ನಿಮ್ಮ ಮನೆಗೆ ಬಂದಿದ್ದೇನೆ. ಚೇತನ್ ಮನೆಯಲ್ಲಿ ಮಲಗಿದ್ದು ಎಳುತ್ತಿಲ್ಲ. ಕೂಡಲೇ ಮನೆಗೆ ಬನ್ನಿ ಎಂದು ತಿಳಿಸಿದ್ದಳು. ಪುಷ್ಪಾ ಅವರು 11.30 ಗಂಟೆಗೆ ಬಂದು ನೋಡಿದಾಗ ಮನೆಯ ಬಾತ್‌ರೂಂ ಮತ್ತು ಮನೆಯ ಮಧ್ಯೆ ಇರುವ ಪ್ಯಾಸೇಜ್‌ನಲ್ಲಿ ಚೇತನ್ ಮಲಗಿದ ಸ್ಥಿತಿಯಲ್ಲಿದ್ದು ಎಬ್ಬಿಸಲು ಪ್ರಯತ್ನಿಸಿದರೂ ಏಳದೇ ಇದ್ದಾಗ ಪುಷ್ಪಾ ಅವರು ಮನೆಯ ಛಾಮಣಿ ಕಡೆ ನೋಡಿದಾಗ ಲುಂಗಿಯಲ್ಲಿ ನೇಣು ಹಾಕಿಕೊಂಡು ಚೇತನ್ ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿತ್ತು.

ಈ ವೇಳೆ ಪುಷ್ಪಾ ಅವರು ಚೈತನ್ಯಾಳಲ್ಲಿ ಪ್ರಶ್ನಿಸಿದಾಗ ಇನ್‌ಸ್ಟಾಗ್ರಾಂನಲ್ಲಿ ಬೇರೆ ಹುಡುಗಿಯೊಬ್ಬಳಿಗೆ ಅವರು ಲೈಕ್ ಮಾಡಿರುವುದನ್ನು ಪ್ರಶ್ನಿಸಲು ತಾನು ಮನೆಗೆ ಬಂದಿದ್ದೆ. ಈ ವಿಚಾರದ ಬಗ್ಗೆ ನಮ್ಮೊಳಗೆ ಗಲಾಟೆಯಾಗಿತ್ತು. ಇದರಿಂದ ಬೇಸರಗೊಂಡ ಚೇತನ್ ಮನೆಯೊಳಗೆ ಓಡಿ ಹೋಗಿ ಛಾವಣಿಯ ಅಡ್ಡಕ್ಕೆ ಲುಂಗಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು ತಾನೇ ಕೆಳಗಿಳಿಸಿ ಆರೈಕೆ ಮಾಡಿರುವುದಾಗಿ ತಿಳಿಸಿದ್ದಳು. ಬಳಿಕ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಘಟನೆಯ ಬಗ್ಗೆ ಪ್ರಕರಣ ದಾಲಿಸಿಕೊಂಡಿರುವ ಪುಂಜಾಲಕಟ್ಟೆ ಠಾಣಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here